ರಾಯಚೂರು: ಸರ್ಕಾರವು ಖಾಸಗಿ ಶಾಲೆ ಹಾಗೂ ಸರ್ಕಾರಿ ಶಾಲೆಗಳ ನಡುವೆ ಭೇದಭಾವ ಮಾಡುತ್ತಿದೆ ಎಂದು ಆರೋಪಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ ಶಿಕ್ಷಕ ದಿನಾಚರಣೆಯ ಕಾರ್ಯಕ್ರಮದಲ್ಲಿ ಕಪ್ಪು ಪಟ್ಟಿ ಧರಿಸಿ ಅಸಮಾಧಾನ ಹೊರ ಹಾಕಿರುವ ಘಟನೆ ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ.
ಸಿಂಧನೂರಿನ ಶ್ರೀಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಶಿಕ್ಷಕ ದಿನಾಚರಣೆ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಿಕ್ಷಕರು ಮತ್ತು ಆಡಳಿತ ಮಂಡಳಿಯವರು ಖಾಸಗಿ ಶಿಕ್ಷಣ ಸಂಸ್ಥೆಗಳ ಬಗ್ಗೆ ಮತ್ತು ಅದರಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ಬಗ್ಗೆ ಹಾಗೂ ವಿದ್ಯಾರ್ಥಿಗಳ ಬಗ್ಗೆ ಸರ್ಕಾರದ ದ್ವಂದ್ವ ನೀತಿಯನ್ನು ಖಂಡಿಸಿ ಕಪ್ಪುಪಟ್ಟಿ ಧರಿಸುವ ಮುಖಾಂತರ ಅಸಂತೃಪ್ತಿ ವ್ಯಕ್ತಪಡಿಸಿದರು.