ರಾಯಚೂರು: ನಗರದ ಸೂರ್ಯೋದಯ ವಾಕಿಂಗ್ ಕ್ಲಬ್ನ ವಾರ್ಷಿಕೋತ್ಸವದ ನಿಮಿತ್ತ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಸನ್ಮಾನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಎಸ್ಎಸ್ಎಲ್ಸಿ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸೌಹಾರ್ಧ ಕ್ರಿಕೆಟ್ ಟೂರ್ನಿಮೆಂಟ್ನಲ್ಲಿ ವಿಜೇತ ತಂಡಕ್ಕೆ ಟ್ರೋಫಿ ವಿತರಣೆ, ಉಚಿತ ಕೋಚಿಂಗ್ ನೀಡಿದ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.
ನಗರದ ರಂಗಮಂದಿರದಲ್ಲಿ ನಡೆದ ಈ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಭಾರತ ದೇಶ ಗಣರಾಜ್ಯವಾದ ನಂತರ ಶೈಕ್ಷಣಿಕ, ಆರ್ಥಿಕ, ಸಾಧನೆ ಮಾಡಿದ್ದು, ಆದರೆ, ನೈತಿಕವಾಗಿ, ಸಾಂಸ್ಕೃತಿಕ ವಾಗಿ ದಿವಾಳಿಯಾಗುತ್ತಿದೆ. ನೈತಿಕ ಮೌಲ್ಯಗಳು ಕುಸಿಯುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.