ರಾಯಚೂರು:ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಲಾರಿ ಹಾಗೂ ಚಾಲಕನನ್ನು ವಶಕ್ಕೆ ಪಡೆದ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗುರಗುಂಟಾ ಮಾರ್ಗ ಬಳಿ ನಡೆದಿದೆ.
ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಜಾನುವಾರುಗಳ ರಕ್ಷಣೆ: ಚಾಲಕ ವಶಕ್ಕೆ - Raichur Cattle story
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗುರಗುಂಟಾ ರಸ್ತೆ ಬಳಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಲಾರಿ ಹಾಗೂ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.
ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಜಾನುವಾರುಗಳ ರಕ್ಷಣೆ
ಚಾಲಕ ಮೊಹಮ್ಮದ್ ಮನ್ಸೂರ್ ಬಂಧಿತ ಆರೋಪಿ. ಸುರಪುರದಿಂದ ಬೆಂಗಳೂರಿನತ್ತ ಸುಮಾರು 14 ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಆದರೆ ಮಾರ್ಗ ಮಧ್ಯೆ ಪೊಲೀಸರು ಪರಿಶೀಲನೆ ನಡೆಸಿದಾಗ, ಅನುಮತಿ ಇಲ್ಲದೆ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಲಾರಿಯನ್ನು ಜಪ್ತಿ ಮಾಡಿ, ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ಜಾನುವಾರುಗಳನ್ನು ರಕ್ಷಿಸಿ ಲಿಂಗಸುಗೂರಿನ ಗೋಶಾಲೆಗೆ ರವಾನಿಸಲಾಗಿದೆ.
ಘಟನಾ ಸಂಬಂಧ ಪಿಎಸ್ಐ ಮುದ್ದುರಂಗಸ್ವಾಮಿ, ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.