ರಾಯಚೂರು:ಮೆಣಸಿನಕಾಯಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಬಾಲ ಕಾರ್ಮಿಕಳನ್ನ ಜಿಲ್ಲಾ ಕಾರ್ಮಿಕ ಯೋಜನೆ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.
ಮೆಣಸಿನಕಾಯಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಬಾಲ ಕಾರ್ಮಿಕಳ ರಕ್ಷಣೆ - ರಾಯಚೂರು ಸುದ್ದಿ
ಮೆಣಸಿನಕಾಯಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಬಾಲ ಕಾರ್ಮಿಕಳನ್ನ ಜಿಲ್ಲಾ ಕಾರ್ಮಿಕ ಯೋಜನೆ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.
ಮೆಣಸಿನಕಾಯಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಬಾಲ ಕಾರ್ಮಿಕಳ ರಕ್ಷಣೆ
ಜಿಲ್ಲೆಯ ದೇವದುರ್ಗ ತಾಲೂಕಿನ ಸುಂಕೇಶ್ವರ ಸೀಮಾಂತರದಲ್ಲಿ ಬಸವರಾಜ,ವಿರೂಪಾಕ್ಷಪ್ಪ ಹಾಗೂ ಸಿದ್ದಲಿಂಗಪ್ಪ ಎಂಬುವರ ಜಮೀನಲ್ಲಿ ಕೆಲಸ ಮಾಡುತ್ತಿದ್ದ 10 ವರ್ಷದ ಬಾಲ ಕಾರ್ಮಿಕಳನ್ನ ರಕ್ಷಣೆ ಮಾಡಿ, ಮಕ್ಕಳ ಕಲ್ಯಾಣ ಸಮಿತಿಗೆ ಹಸ್ತಾಂತರಿಸಿದ್ದಾರೆ.
ಅಲ್ಲದೇ, ಬಾಲ ಕಾರ್ಮಿಕಳಿಂದ ಹೊಲದಲ್ಲಿ ಕೆಲಸ ಮಾಡಿಕೊಳ್ಳುತ್ತಿದ್ದ ಜಮೀನು ಮಾಲೀಕರ ವಿರುದ್ಧ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ತಿದ್ದುಪಡಿ ಕಾಯಿದೆ ಅಡಿ ಗಬ್ಬೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಬಾಲ ಕಾರ್ಮಿಕ ಯೋಜನಾಧಿಕಾರಿ ಮಂಜುನಾಥ ರೆಡ್ಡಿ ತಿಳಿಸಿದ್ದಾರೆ.