ರಾಯಚೂರು:ನಗರದ ವಿವಿಧ ಅಂಗಡಿಗಳಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಬಾಲಕಾರ್ಮಿಕರನ್ನು ರಕ್ಷಣೆ ಮಾಡಿ ಬಾಲಕರ ಕಲ್ಯಾಣ ಸಮಿತಿಗೆ ಹಸ್ತಾಂತರಿಸಲಾಗಿದೆ.
ಇಬ್ಬರು ಬಾಲ ಕಾರ್ಮಿಕರ ರಕ್ಷಣೆ: ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲು - Protection of two child laborers
ಮಕ್ಕಳಿಂದ ಕೆಲಸ ಮಾಡಿಸುತ್ತಿದ್ದ ಅಂಗಡಿ ಮಾಲೀಕರ ವಿರುದ್ಧ ಸದರ್ ಬಜಾರ್ ಠಾಣೆಯಲ್ಲಿ ಪ್ರತ್ಯೇಕ ಎರಡು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾಧಿಕಾರಿ ಮಂಜುನಾಥ ರೆಡ್ಡಿ ತಿಳಿಸಿದ್ದಾರೆ.
ಬಾಲ ಕಾರ್ಮಿಕರ ರಕ್ಷಣೆ
ಜಿಲ್ಲೆಯಲ್ಲಿ ಬಾಲ ಕಾರ್ಮಿಕರ ರಕ್ಷಣೆ ಕಾರ್ಯ ಮುಂದುವರೆದಿದೆ. ನಗರದ ಬಟ್ಟೆ ಅಂಗಡಿ ಮತ್ತು ಸ್ಟೀಲ್ ಆ್ಯಂಡ್ ಅಲ್ಯೂಮಿನಿಯಂ ಮಾರಾಟ ಅಂಗಡಿ ಮೇಲೆ ದಾಳಿ ನಡೆಸುವ ಮೂಲಕ ಇಬ್ಬರು ಬಾಲ ಕಾರ್ಮಿಕರನ್ನು ರಕ್ಷಿಸಿ ಬಾಲಕರ ವೆಲ್ ಫೇರ್ ಕಮಿಟಿಗೆ ಹಸ್ತಾಂತರಿಸಲಾಗಿದೆ.
ಮಕ್ಕಳಿಂದ ಕೆಲಸ ಮಾಡಿಸುತ್ತಿದ್ದ ಅಂಗಡಿ ಮಾಲೀಕರ ವಿರುದ್ಧ ಸದರ್ ಬಜಾರ್ ಠಾಣೆಯಲ್ಲಿ ಪ್ರತ್ಯೇಕ ಎರಡು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾಧಿಕಾರಿ ಮಂಜುನಾಥ ರೆಡ್ಡಿ ತಿಳಿಸಿದ್ದಾರೆ.