ರಾಯಚೂರು :ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದನ್ನು ಖಂಡಿಸಿ ವಿವಿಧ ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ಶಾಸಕರಿಂದ ಪ್ರಜಾಪ್ರಭುತ್ವದ ಕಗ್ಗೂಲೆ; ಬಿಸಿಲುನಾಡಿನಲ್ಲಿ ಸಂಘಟನೆಗಳ ಆಕ್ರೋಶ - Kannada news
ಕ್ಷೇತ್ರದಲ್ಲಿ ಬರ ತಾಂಡವವಾಡುತ್ತಿದೆ, ಜನ-ಜಾನವಾರು ಕುಡಿಯುವ ನೀರು, ಮೇವು ಇಲ್ಲದೆ ಪರದಾಡುತ್ತಿದ್ದಾರೆ. ಇಂತಹ ಸಂದಿಗ್ಧ ಸಂದರ್ಭದಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಶಾಸಕರೇ ರಾಜೀನಾಮೆ ನೀಡಿ ರೆಸಾರ್ಟ್ ರಾಜಕಾರಣ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ರು.
ಜಿಲ್ಲೆಯ ಮಸ್ಕಿ ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ಸರ್ಕಲ್ ಬಳಿ ಪ್ರಗತಿಪರ ಸಂಘಟನೆಗಳ ಮುಖಂಡರು, ಶಾಸಕ ಪ್ರತಾಪ್ ಗೌಡ ಪಾಟೀಲ್ ಸೇರಿದಂತೆ, ರಾಜೀನಾಮೆ ನೀಡಿರುವ ಇತರೆ ಶಾಸಕರ ಭಾವಚಿತ್ರ ಪ್ರತಿಕೃತಿ ದಹಿಸುವ ಮೂಲಕ ಪ್ರತಿಭಟನೆ ನಡೆಸಿದ್ರು. ಶಾಸಕರು ಹಣದ ಆಮಿಷಕ್ಕೊಳಗಾಗಿ ಮತದಾರರ ತೀರ್ಪು ಧಿಕ್ಕರಿಸುವ ಮೂಲಕ ಪ್ರಜಾಪ್ರಭುತ್ವದ ಕಗ್ಗೂಲೆ ಮಾಡಿದ್ದಾರೆ ಎಂದು ಕಿಡಿ ಕಾರಿದ್ರು.
ಕ್ಷೇತ್ರದಲ್ಲಿ ಬರ ತಾಂಡವಾಡುತ್ತಿದೆ, ಜನ-ಜಾನವಾರು ಕುಡಿಯುವ ನೀರು, ಮೇವು ಇಲ್ಲದೆ ಪರದಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಶಾಸಕರೇ ರಾಜೀನಾಮೆ ನೀಡಿ ರೆಸಾರ್ಟ್ ರಾಜಕಾರಣ ಮಾಡುತ್ತಿದ್ದಾರೆ ಎಂದು ಶಾಸಕರ ನಡವಳಿಕೆಯನ್ನು ಖಂಡಿಸಿದರು.