ಕರ್ನಾಟಕ

karnataka

ETV Bharat / state

ತೈಲ ಉತ್ಪನ್ನಗಳ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್​ನಿಂದ ಪ್ರತಿಭಟನೆ - protest by congressional committee

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ರಾಯಚೂರು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಕಾಂಗ್ರೆಸ್ ಸಮಿತಿಯಿಂದ ವಿನೂತನ ಪ್ರತಿಭಟನೆ
ಕಾಂಗ್ರೆಸ್ ಸಮಿತಿಯಿಂದ ವಿನೂತನ ಪ್ರತಿಭಟನೆ

By

Published : Feb 20, 2021, 2:33 PM IST

ರಾಯಚೂರು: ಕೇಂದ್ರ ಸರ್ಕಾರದ ರೈತ ವಿರೋಧಿ ಕೃಷಿ ಕಾನೂನುಗಳು ಹಾಗೂ ತೈಲ ಉತ್ಪನ್ನಗಳ ಬೆಲೆ ಏರಿಕೆ ಖಂಡಿಸಿ ರಾಯಚೂರು ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ರಸ್ತೆ ಮೇಲೆ ಅಡುಗೆ ಮಾಡಿ ಪ್ರತಿಭಟನೆ ನಡೆಸಲಾಯಿತು.

ಕಾಂಗ್ರೆಸ್ ಸಮಿತಿಯಿಂದ ವಿನೂತನ ಪ್ರತಿಭಟನೆ

ನಗರದ ಅಂಬೇಡ್ಕರ್ ಸರ್ಕಲ್​ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಂಡಿಯಲ್ಲಿ ಬೈಕ್, ಗ್ಯಾಸ್ ಒಲೆ ಪ್ರದರ್ಶನ ಮಾಡಿದರು. ಮಹಿಳಾ ವಿಭಾಗದ ಕಾರ್ಯಕರ್ತರು ಪ್ರತಿಭಟನಾ ಸ್ಥಳದಲ್ಲಿ ಅಡುಗೆ ತಯಾರಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಡುಗೆ ಅನಿಲ, ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗುತ್ತಿದೆ. ಇದರಿಂದ ಜನಸಾಮಾನ್ಯರಿಗೆ ಹೊರೆಯಾಗಿದ್ದು, ಜೀವನ ನಡೆಸುವುದು ಕಷ್ಟವಾಗುತ್ತಿದೆ. ಜೊತೆಗೆ ಜನರು ನಿತ್ಯ ಬಳಸುವ ತರಕಾರಿ, ಆಹಾರ ಧಾನ್ಯಗಳ ಬೆಲೆ ಸಹ ಏರಿಕೆಯಾಗುತ್ತಿದೆ ಎಂದು ಆರೋಪಿಸಿದರು.

ಕೂಡಲೇ ಕೇಂದ್ರ ಸರ್ಕಾರ ಬೆಲೆ ನಿಯಂತ್ರಣ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಈ ವೇಳೆ ಎಐಸಿಸಿ ಕಾರ್ಯದರ್ಶಿ ಎನ್.ಎಸ್. ಬೋಸರಾಜ್, ಮುಖಂಡರಾದ ರುದ್ರಪ್ಪ ಅಂಗಡಿ, ಜಯಣ್ಣ, ಅಮರೇಗೌಡ ಹಂಚಿನಾಳ, ಆಸ್ಲಂಪಾಷಾ, ಕೆ.ಶಾಂತಪ್ಪ, ಯುವ ಘಟಕದ ಜಿಲ್ಲಾಧ್ಯಕ್ಷ ಅರುಣ ದೋತ್ರಬಂಡಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನಿರ್ಮಲಾ ಬೆಣ್ಣೆ, ಮುಂಖಡರಾದ ನವಿನೀತ್ ಆಂದೋನಿ ಇತರರು ಉಪಸ್ಥಿತರಿದ್ದರು.

ABOUT THE AUTHOR

...view details