ರಾಯಚೂರು: ಐಟಿ ಅಧಿಕಾರಿಗಳು ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರನ್ನ ಸಿಕ್ಕಿ ಹಾಕಿಸಲು ಪ್ರಯತ್ನಿಸ್ತಿದ್ದಾರೆ ಎಂದು ಆರೋಪಿಸಿ ಅಖಿಲ ಕರ್ನಾಟಕ ಡಿ ಕೆ ಶಿವಕುಮಾರ ಅಭಿಮಾನಿಗಳು ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದರು.
ರಾಯಚೂರಿನಲ್ಲಿ ಡಿಕೆಶಿ ಅಭಿಮಾನಿಗಳಿಂದ ಪ್ರತಿಭಟನೆ.. - tippu sultan garden
ಕೇಂದ್ರ ಸರ್ಕಾರ ಇಡಿ ಮತ್ತು ಸಿಬಿಐ ಇಲಾಖೆಗಳನ್ನು ದುರ್ಬಳಕೆ ಮಾಡಿಕೊಂಡು ನಾಯಕರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿ ಡಿಕೆ ಶಿವಕುಮಾರ ಅಭಿಮಾನಿಗಳು ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಟಿಪ್ಪು ಸುಲ್ತಾನ್ ಗಾರ್ಡನ್ನಲ್ಲಿ ಜಮಾಯಿಸಿದ ಅಭಿಮಾನಿಗಳು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಡಿ ಮತ್ತು ಸಿಬಿಐ ಇಲಾಖೆಗಳನ್ನು ದುರ್ಬಳಕೆ ಮಾಡಿಕೊಂಡು ನಾಯಕರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ನಮ್ಮ ನಾಯಕನನ್ನು ದುರ್ಬಲಗೊಳಿಸಲು ಮತ್ತು ರಾಜಕೀಯವಾಗಿ ಡಿಕೆಶಿಯನ್ನು ಮುಗಿಸಿಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇಂತಹ ಬೆದರಿಕೆಗಳಿಗೆ ನಾವೂ ಬಗ್ಗಲ್ಲ. ನಾವೆಲ್ಲ ಶಿವಕುಮಾರ ಬೆಂಬಲಕ್ಕೆ ಇದ್ದೇವೆ. ಒಂದು ವೇಳೆ ಇದೇ ರೀತಿ ಕೇಂದ್ರ ತನ್ನ ನಿಲುವನ್ನು ಪ್ರದರ್ಶಿಸಿದರೆ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಸಿದರು.