ಕರ್ನಾಟಕ

karnataka

By

Published : Sep 16, 2019, 3:28 PM IST

ETV Bharat / state

ಕೇಂದ್ರ-ರಾಜ್ಯ ಸರ್ಕಾರದ ವಿರುದ್ಧ ರಾಯಚೂರು ಜಿಲ್ಲಾ ಕಾಂಗ್ರೆಸ್​​​ ಸಮಿತಿಯಿಂದ ಪ್ರತಿಭಟನೆ

ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ರಾಯಚೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.

ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ

ರಾಯಚೂರು:ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.

ರಾಯಚೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ

ನಗರದ ಅಂಬೇಡ್ಕರ್ ಸರ್ಕಲ್​​ನಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನೆ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳುವ ಮೂಲಕ ದ್ವೇಷದ ರಾಜಕಾರಣ ಮಾಡುತ್ತಿದೆ. ರಾಜ್ಯದಲ್ಲಿ ಅಪ್ಪಳಿಸಿರುವ ಪ್ರವಾಹದಿಂದ ಜನರು ತತ್ತರಿಸಿದ್ದಾರೆ.

ಅವರ ನೆರವಿಗೆ ಧಾವಿಸಿ ರಾಜ್ಯ ಸರ್ಕಾರ ಪ್ರವಾಹ ಸಂತ್ರಸ್ತರ ಸಂಕಷ್ಟ, ಗೋಳು ಕೇಳುತ್ತಿಲ್ಲ. ಅವರಿಗೆ ನೀಡಬೇಕಾದ ಪರಿಹಾರಧನವನ್ನು ಒದಗಿಸುವಲ್ಲಿ ವಿಫಲವಾಗಿದೆ ಎಂದು ದೂರಿದರು. ಇಡಿ ತನಿಖಾ ಸಂಸ್ಥೆ ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ನಾಯಕರ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ದೂರಿದರು.

ABOUT THE AUTHOR

...view details