ಕರ್ನಾಟಕ

karnataka

ETV Bharat / state

ಡ್ರಗ್ಸ್​​ ಮಾಫಿಯಾ ನಿಯಂತ್ರಣಕ್ಕೆ ಕಡಿವಾಣ ಹಾಕಲು ಆಗ್ರಹ: ಎಬಿವಿಪಿ ಪ್ರತಿಭಟನೆ - lingasuguru

ಡ್ರಗ್ಸ್​​ ಮಾಫಿಯಾದ ನಿಯಂತ್ರಣಕ್ಕೆ ವಿಶೇಷ ಕಾನೂನು ಜಾರಿಗೊಳಿಸುವಂತೆ ಆಗ್ರಹಿಸಿ ಎಬಿವಿಪಿ ಸಂಘಟನೆಯಿಂದ ಲಿಂಗಸುಗೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.

lingasuguru
ಎಬಿವಿಪಿ ಸಂಘಟನೆ ಪ್ರತಿಭಟನೆ

By

Published : Sep 3, 2020, 6:53 PM IST

ಲಿಂಗಸುಗೂರು: ರಾಜ್ಯದಲ್ಲಿ ಸಮಾಜಕ್ಕೆ ಮಾದರಿ ಆಗಬೇಕಿದ್ದ ಪ್ರತಿಷ್ಠಿತ ವ್ಯಕ್ತಿಗಳು ಡ್ರಗ್ಸ್​​ ಮಾಫಿಯಾದಲ್ಲಿ ಶಾಮೀಲಾಗಿದ್ದು, ಡ್ರಗ್ಸ್ ನಿಯಂತ್ರಣಕ್ಕೆ ವಿಶೇಷ ಕಾನೂನು ಜಾರಿಗೊಳಿಸುವಂತೆ ಆಗ್ರಹಿಸಿ ಎಬಿವಿಪಿ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.

ಸ್ಯಾಂಡಲ್​ವುಡ್ ಹೆಸರಲ್ಲಿ ಬಹಿರಂಗಗೊಂಡಿರುವ ಡ್ರಗ್ಸ್ ಮಾಫಿಯಾ ಅನೇಕ ರಂಗಗಳನ್ನು ತಲ್ಲಣಗೊಳಿಸಿ ಸಮಾಜಘಾತುಕ ಶಕ್ತಿಗಳಿಗೆ ಪ್ರೋತ್ಸಾಹಿಸುತ್ತಿರುವ ಶಂಕೆ ಆವರಿಸಿಕೊಂಡಿದೆ ಎಂದು ಆಗ್ರಹಿಸಿದರು.

ಡ್ರಗ್ಸ್​​ ಮಾಫಿಯಾದ ನಿಯಂತ್ರಣಕ್ಕೆ ವಿಶೇಷ ಕಾನೂನು ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.

ಮಾದಕ ವಸ್ತುಗಳ ಸೇವನೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಜೊತೆಗೆ ಸಮಾಜದ ಮೇಲೂ ಅಪಾಯದ ಗಂಟೆ ಬಾರಿಸುತ್ತಿದೆ. ಹೀಗಾಗಿ ಸರ್ಕಾರ ಅವರನ್ನು ರಾಜದ್ರೋಹ ಆರೋಪದಡಿ ಬಂಧಿಸಿ ಶಿಕ್ಷಿಸುವ ಜೊತೆಗೆ ವಿಶೇಷ ಕಾನೂನು ಜಾರಿಗೆ ತರಲು ಒತ್ತಾಯಿಸಲಾಯಿತು.

ABOUT THE AUTHOR

...view details