ರಾಯಚೂರು: ಕೂಲಿ ಕಾರ್ಮಿಕರಿಗೆ ಸರಿಯಾದ ಚಿಕಿತ್ಸೆ ನೀಡದೆ ಸಾವಿಗೆ ಕಾರಣವಾದ ರಾಯಚೂರು ರಿಮ್ಸ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಖಂಡಿಸಿ ದೇವಿನಗರ ನಿವಾಸಿಗಳು ಹಾಗೂ ಕೂಲಿ ಕಾರ್ಮಿಕರು ಆಸ್ಪತ್ರೆಯ ಶವಾಗಾರದ ಎದುರುಗಡೆ ಪ್ರತಿಭಟನೆ ನಡೆಸಿದರು.
ಕಾಮಗಾರಿ ವೇಳೆ ಗಾಯಗೊಂಡಿದ್ದ ಕಾರ್ಮಿಕ ಸಾವು: ವೈದ್ಯರ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ - ವೈದ್ಯರ ನಿರ್ಲಕ್ಷ್ಯ ಖಂಡಿಸಿ ರಾಯಚೂರಿನಲ್ಲಿ ಪ್ರತಿಭಟನೆ
ಕೂಲಿ ಕಾರ್ಮಿಕರಿಗೆ ಸರಿಯಾದ ಚಿಕಿತ್ಸೆ ನೀಡದೆ ಸಾವಿಗೆ ಕಾರಣವಾದ ರಾಯಚೂರು ರಿಮ್ಸ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಖಂಡಿಸಿ ದೇವಿನಗರ ನಿವಾಸಿಗಳು ಹಾಗೂ ಕೂಲಿ ಕಾರ್ಮಿಕರು ಆಸ್ಪತ್ರೆಯ ಶವಾಗಾರದ ಎದುರುಗಡೆ ಪ್ರತಿಭಟನೆ ನಡೆಸಿದರು.
ವೈದ್ಯರ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ
ದೇವಿನಗರದ ನಿವಾಸಿ ಗುರುಸ್ವಾಮಿ ಎಂಬ ಕಾರ್ಮಿಕ ನಿನ್ನೆ ಕಟ್ಟಡ ಕಾಮಗಾರಿ ವೇಳೆ ಮೇಲಿಂದ ಬಿದ್ದು ಗಾಯಗೊಂಡಿದ್ದ. ಗುರುಸ್ವಾಮಿಯನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ನೀಡಿದ ವೈದ್ಯರು ಏನು ತೊಂದರೆ ಇಲ್ಲವೆಂದು ಜನರಲ್ ವಾರ್ಡ್ಗೆ ಶಿಫ್ಟ್ ಮಾಡಿದ್ದಾರೆ. ಆದರೆ ಇಂದು ಬೆಳಿಗ್ಗೆ ಕಾರ್ಮಿಕ ಮೃತಪಟ್ಟಿದ್ದಾನೆ.
ಕಾರ್ಮಿಕನ ಸಾವಿಗೆ ರಿಮ್ಸ್ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿ ಪ್ರತಿಭಟನೆಯನ್ನ ನಡೆಸಲಾಗುತ್ತಿದೆ.