ರಾಯಚೂರು: ಪೌರತ್ವ ಕಾಯಿದೆ ವಿರೋಧಿಸಿ ರಾಯಚೂರಿನಲ್ಲಿ ವಿದ್ಯಾರ್ಥಿಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು.
ಪೌರತ್ವ ಕಾಯಿದೆ ವಿರೋಧಿಸಿ ರಾಯಚೂರಿನಲ್ಲಿ ಪ್ರತಿಭಟನೆ - protest by raichur students union
ಪೌರತ್ವ ಕಾಯಿದೆ ವಿರೋಧಿಸಿ ರಾಯಚೂರಿನ ಅಂಬೇಡ್ಕರ್ ಸರ್ಕಲ್ನಲ್ಲಿ ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಕೇಂದ್ರ ಸರ್ಕಾರ ವಿರುದ್ದ ಘೋಷಣೆ ಕೂಗುತ್ತಾ ರಾಯಚೂರು ವಿದ್ಯಾರ್ಥಿಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು.
ಪೌರತ್ವ ಕಾಯಿದೆ ವಿರೋಧಿಸಿ ರಾಯಚೂರಿನಲ್ಲಿ ಪ್ರತಿಭಟನೆ
ನಗರದ ಅಂಬೇಡ್ಕರ್ ಸರ್ಕಲ್ನಲ್ಲಿ ಕೈಗೆ ಕಪ್ಪುಪಟ್ಟಿ ಕಟ್ಟಿಕೊಂಡು, ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದರು. ಈ ವೇಳೆ, ಕೇಂದ್ರ ದೇಶದಲ್ಲಿ ಸಮುದಾಯಗಳ ನಡುವೆ ತಾರತಮ್ಯ ಮೂಡಿಸುವ ಕೆಲಸ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಪೌರತ್ವ ಕಾಯಿದೆಗೆ ನಮ್ಮ ತೀವ್ರ ವಿರೋಧವಿದ್ದು, ಅದನ್ನ ವಾಪಸ್ ಪಡೆಯುವಂತೆ ಒತ್ತಾಯಿಸಿದ್ರು. ಪ್ರತಿಭಟನೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
Last Updated : Dec 24, 2019, 4:34 PM IST