ಕರ್ನಾಟಕ

karnataka

ಹಥ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ ಖಂಡಿಸಿ ರಾಯಚೂರಿನಲ್ಲಿ ಪ್ರತಿಭಟನೆ

ಸೆ.14 ರಂದು ಉತ್ತರ ಪ್ರದೇಶದ ಹಥ್ರಾಸ್ ನಲ್ಲಿ ಗುಂಪೊಂದು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಸೂಕ್ತ ಚಿಕಿತ್ಸೆ ದೊರೆಯದೆ ಕೊನೆಯುಸಿರೆಳೆದಿರುವುದು ಖಂಡನಿಯ. ಕೇಂದ್ರ ಸರ್ಕಾರ ಹಾಗೂ ಉತ್ತರ ಪ್ರದೇಶ ಸರ್ಕಾರ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣ ತಡೆಯುವಲ್ಲಿ ವಿಫಲವಾಗಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು.

By

Published : Sep 30, 2020, 4:09 PM IST

Published : Sep 30, 2020, 4:09 PM IST

protest-in-raichur-condemning-hathras-mass-rape-case
ಹಥ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ ಖಂಡಿಸಿ ರಾಯಚೂರಿನಲ್ಲಿ ಪ್ರತಿಭಟನೆ

ರಾಯಚೂರು: ಉತ್ತರ ಪ್ರದೇಶದ ಹಥ್ರಾಸ್​ನಲ್ಲಿ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಕೃತ್ಯವನ್ನು ಖಂಡಿಸಿ ಎಐಡಿಎಸ್​​ಓ, ಎಐಡಿವೈಓ, ಎಐಎಂಎಸ್​​ಎಸ್ ಸಂಘಟನೆಗಳ ಮುಖಂಡರು ಜಂಟಿಯಾಗಿ ಪ್ರತಿಭಟನೆ ನಡೆಸಿದರು.

ಹಥ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ ಖಂಡಿಸಿ ರಾಯಚೂರಿನಲ್ಲಿ ಪ್ರತಿಭಟನೆ

ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿದ ಪದಾಧಿಕಾರಿಗಳು, ಸೇ.14 ರಂದು ಉತ್ತರ ಪ್ರದೇಶದ ಹಥ್ರಾಸ್ ನಲ್ಲಿ ಗುಂಪೊಂದು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಸೂಕ್ತ ಚಿಕಿತ್ಸೆ ದೊರೆಯದೆ ಕೊನೆಯುಸಿರೆಳೆದಿರುವುದು ಖಂಡನಿಯ.

ಕೇಂದ್ರ ಸರ್ಕಾರ ಹಾಗೂ ಉತ್ತರ ಪ್ರದೇಶ ಸರ್ಕಾರ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣ ತಡೆಯುವಲ್ಲಿ ವಿಫಲವಾಗಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ದೇಶದಲ್ಲಿ ಮಹಿಳೆಯರ ರಕ್ಷಣೆಗೆ ಕಠಿಣ ಕಾನೂನು ಜಾರಿಗೊಳಿಸಬೇಕು ಎಂದು ಪದಾಧಿಕಾರಿಗಳು ಆಗ್ರಹಿಸಿದರು.

ABOUT THE AUTHOR

...view details