ರಾಯಚೂರು: ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಕರ ಬಾಕಿ ವೇತನ ಪಾವತಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಮತ್ತು ಶಿಕ್ಷಕರ ಹೋರಾಟ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು.
ಬಾಕಿ ವೇತನ ಪಾವತಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರು, ಶಿಕ್ಷಕರಿಂದ ಪ್ರತಿಭಟನೆ - ವೇತನ ಪಾವತಿಸುವಂತೆ ಆಗ್ರಹಿಸಿ ರಾಯಚೂರಿನಲ್ಲಿ ಪ್ರತಿಭಟನೆ
ಪ್ರಥಮ ದರ್ಜೆ ಕಾಲೇಜು, ಪಿಯು ಕಾಲೇಜು ಮತ್ತು ಪ್ರೌಢ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುವ ಅತಿಥಿ ಉಪನ್ಯಾಸಕರು ಮತ್ತು ಶಿಕ್ಷಕರಿಗೆ ವೇತನ ಪಾವತಿಸುವಂತೆ ಆಗ್ರಹಿಸಿ ರಾಯಚೂರು ಜಿಲ್ಲಾಧಿಕಾರಿ ಮುಂಭಾಗ ಪ್ರತಿಭಟನೆ ನಡೆಯಿತು.
ನಗರದ ಜಿಲ್ಲಾಧಿಕಾರಿ ಮುಂಭಾಗ ಜಮಾಯಿಸಿದ ಸಂಘಟನೆ ಸದಸ್ಯರು, ರಾಜ್ಯದಲ್ಲಿ 413 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 14,564 ಅತಿಥಿ ಉಪನ್ಯಾಸಕರು ಮತ್ತು ಪ್ರೌಢ ಶಾಲೆ, ಪಿಯು ಕಾಲೇಜುಗಳಲ್ಲಿ 22,150 ಅತಿಥಿ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರಿಗೆ ಸರ್ಕಾರ ಸರಿಯಾಗಿ ವೇತನ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಅತಿಥಿ ಉಪನ್ಯಾಸಕರು ಮತ್ತು ಶಿಕ್ಷಕರ ವೇತನ ಪಾವತಿಸುವಂತೆ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಅತಿಥಿ ಉಪನ್ಯಾಸಕರು, ಅತಿಥಿ ಶಿಕ್ಷಕರು, ಎಐಡಿವೈಒ ಸಂಘಟನೆ ಮುಖಂಡರು ಭಾಗವಹಿಸಿದ್ದರು.