ರಾಯಚೂರು: ಹೈದರಾಬಾದ್ನಲ್ಲಿ ನಡೆದ ಪಶುವೈದ್ಯೆಯ ಅತ್ಯಾಚಾರ, ಕೊಲೆ ಖಂಡಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘ ಹಾಗೂ ಜಾಗೃತ ಮಹಿಳಾ ಸಂಘದ ವತಿಯಿಂದ ರಾಯಚೂರಿನಲ್ಲಿ ಧರಣಿ ನಡೆಸಿದರು.
ಹತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ಕೂಲಿ ಕಾರ್ಮಿಕರ ಸಂಘದಿಂದ ಪ್ರತಿಭಟನೆ - ಗ್ರಾಮೀಣ ಕೂಲಿ ಕಾರ್ಮಿಕರ ವತಿಯಿಂದ ರಾಯಚೂರಿನಲ್ಲಿ ಪ್ರತಿಭಟನೆ
ಹೈದರಾಬಾದ್ನಲ್ಲಿ ನಡದ ವೈದ್ಯೆಯ ಮೇಲಿನ ಅತ್ಯಾಚಾರ ಕೊಲೆ ಖಂಡಿಸಿ ರಾಯಚೂರಿನಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರು ಪ್ರತಿಭಟನೆ ಮಾಡಿದರು.
ಪ್ರತಿಭಟನಾನಿರತ ಕಾರ್ಮಿಕರು
ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರಿನ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಪ್ರತಿಭಟನಾ ಧರಣಿ ನಡೆಸಿದ ಕಾರ್ಯಕರ್ತರು, ಈ ಘಟನೆಯ ಬಗ್ಗೆ ತ್ವರಿತಗತಿಯಲ್ಲಿ ತನಿಖೆ ನಡೆಸಿ ಆರೋಪಿಗಳನ್ನು ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಆಗ್ರಹಿಸಿದರು.
ದೇಶದಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯ, ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಅರ್ಧದಷ್ಟು ಮಹಿಳೆಯರು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಮೂಲಕ, ಇಂತಹ ಘಟನೆ ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.