ಕರ್ನಾಟಕ

karnataka

ETV Bharat / state

ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಸೆ. 14ರಂದು ಪ್ರತಿಭಟನೆ: ಬಿ.ನರಸಪ್ಪ ದಂಡೋರ - ಮಾದಿಗ ಮೀಸಲಾತಿ ಹೋರಾಟ ರಾಜ್ಯ ಸಮಿತಿಯ ರಾಜ್ಯಾಧ್ಯಕ್ಷ ಬಿ.ನರಸಪ್ಪ ದಂಡೋರ

ನ್ಯಾಮೂರ್ತಿ ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ಮಾದಿಗ ದಂಡೋರಾ ಹೋರಾಟ ಸಮಿತಿಯಿಂದ ಸೆ. 14ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಮಾದಿಗ ಮೀಸಲಾತಿ ಹೋರಾಟ ರಾಜ್ಯ ಸಮಿತಿಯ ರಾಜ್ಯಾಧ್ಯಕ್ಷ ಬಿ.ನರಸಪ್ಪ ದಂಡೋರ ಹೇಳಿದರು.

demanding implementation of  reservation
ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಸೆ.14ರಂದು ಪ್ರತಿಭಟನೆ: ಬಿ.ನರಸಪ್ಪ ದಂಡೋರ

By

Published : Sep 9, 2020, 2:04 PM IST

ರಾಯಚೂರು: ರಾಜ್ಯದಲ್ಲಿ ಒಳ ಮೀಸಲಾತಿ ಜಾರಿ ಹಾಗೂ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯ ಜಾರಿಗೆ ಆಗ್ರಹಿಸಿ ಸೆ. 14ರಂದು ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಶಾಸಕರ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಮಾದಿಗ ಮೀಸಲಾತಿ ಹೋರಾಟ ರಾಜ್ಯ ಸಮಿತಿಯ ರಾಜ್ಯಾಧ್ಯಕ್ಷ ಬಿ.ನರಸಪ್ಪ ದಂಡೋರ ಹೇಳಿದರು.

ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಸೆ. 14ರಂದು ಪ್ರತಿಭಟನೆ: ಬಿ.ನರಸಪ್ಪ ದಂಡೋರ

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿಗಾಗಿ ಹಲವಾರು ದಶಕಗಳಿಂದ ಹೋರಾಟ ನಡೆಸುತ್ತಿದ್ದು, ಇತ್ತಿಚೆಗೆ ಸರ್ವೋಚ್ಚ ನ್ಯಾಯಾಲಯದ ಪಂಚ ಪೀಠ ಪರಿಶಿಷ್ಟ ಜಾತಿಗಳ ಮಿಸಲಾತಿಯ ಒಳ ಮೀಸಲಾತಿ ವರ್ಗೀಕರಣ, ಜನಸಂಖ್ಯೆ ಆಧಾರಿತ ಮೀಸಲಾತಿ ನೀಡುವ ಅಧಿಕಾರ ರಾಜ್ಯ ಸರ್ಕಾರಗಳಿಗಿದೆ ಎಂದು ಹೇಳಿರುವುದು ಸ್ವಾಗತಾರ್ಹ. ಕೂಡಲೇ ರಾಜ್ಯ ಸರ್ಕಾರ ವರದಿ ಜಾರಿಗೆಗೆ ಮುಂದಾಗಬೇಕು.

ನ್ಯಾಮೂರ್ತಿ ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ಮಾದಿಗ ದಂಡೋರಾ ಹೋರಾಟ ಸಮಿತಿಯಿಂದ ಸೆ. 14ರಂದು ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಶಾಸಕರ ಮನೆ, ಕಾರ್ಯಾಲಯಗಳ ಮುಂದೆ ಪ್ರತಿಭಟಿಸಿ ಮನವಿ ಸಲ್ಲಿಸಿ, ಸದನದಲ್ಲಿ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯಿಸಲಾಗುವುದು ಎಂದರು.

ABOUT THE AUTHOR

...view details