ರಾಯಚೂರು:ಆರೋಗ್ಯ ಕ್ಷೇತ್ರದಲ್ಲಿ ಕಾರ್ಯನಿವಹಿಸುತ್ತಿರುವ ವೈದ್ಯಕೀಯ ಶಿಕ್ಷಣ ವಿಭಾಗದ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಗುತ್ತಿಗೆ-ಹೊರಗುತ್ತಿಗೆ ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ - ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ
ಆರೋಗ್ಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯಕೀಯ ಶಿಕ್ಷಣ ವಿಭಾಗದಲ್ಲಿ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಹಲವಾರು ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ, ಇಲ್ಲಿಯವರೆಗೂ ಸ್ಪಂದಿಸಿಲ್ಲ. ಈ ಹಿನ್ನೆಲೆ ಅನಿರ್ಧಿಷ್ಟಾವಧಿ ಕೆಲಸ ಬಹಿಷ್ಕರಿಸಿ ಹೋರಾಟ ನಡೆಸುತ್ತಿದ್ದರೂ ಸರ್ಕಾರ ತಮ್ಮ ಬೇಡಿಕೆಗಳಿಗೆ ಸ್ಪಂದಿಸದ ಹಿನ್ನೆಲೆ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ.

ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟಿಸಿದ ಪದಾಧಿಕಾರಿಗಳು, ಆರೋಗ್ಯ ಕ್ಷೇತ್ರದಲ್ಲಿ ಕಾರ್ಯನಿವಹಿಸುತ್ತಿರುವ ವೈದ್ಯಕೀಯ ಶಿಕ್ಷಣ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಹಲವಾರು ವರ್ಷಗಳಿಂದ ಹೋರಾಟ ನಡೆಸುತ್ತಿದ್ದರು ಇಲ್ಲಿಯವರೆಗೂ ಸ್ಪಂದಿಸಿಲ್ಲ. ಈ ಹಿನ್ನೆಲೆ ಅನಿರ್ಧಿಷ್ಟಾವಧಿ ಕೆಲಸ ಬಹಿಷ್ಕರಿಸಿ ಹೋರಾಟ ನಡೆಸುತ್ತಿದ್ದರು ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ನೀಡಬೇಕು, ಎಲ್ಲಾ ಹುದ್ದೆಗಳಿಗೆ ವೇತನ ಭತ್ಯೆ ಮತ್ತು ವೇತನ ಶ್ರೇಣಿ ನೀಡಿ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಕೋವಿಡ್ ಸಂದರ್ಭದಲ್ಲಿ ಪ್ರಾಣವನ್ನು ಪಣಕ್ಕಿಟ್ಟು ಕೆಲಸ ಮಾಡುತ್ತಿರುವ ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹೊರ ಗುತ್ತಿಗೆ ನೌಕರರಾಗಿ ರಾಜ್ಯದಲ್ಲಿ 1500ಕ್ಕೂ ಅಧಿಕ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.