ರಾಯಚೂರು:ಸರ್ಕಾರಿ ಕ್ವಾರಂಟೈನ್ ಕೇಂದ್ರದಲ್ಲಿ ಕ್ವಾರಂಟೈನ್ ಮಾಡಲಾಗಿರುವ ಕಾರ್ಮಿಕರು ರಾಜಾರೋಷವಾಗಿ ಹೊರಗಡೆ ಬಂದು ಓಡಾಟ ಮಾಡುತ್ತಿರುವ ದೃಶ್ಯ ರಾಯಚೂರಿನಲ್ಲಿ ಕಂಡು ಬಂದಿದೆ.
ರಾಯಚೂರು: ಕ್ವಾರಂಟೈನ್ ಕೇಂದ್ರದಿಂದ ಹೊರಗಡೆ ಬಂದು ಜನರ ಓಡಾಟ! - Raichur
ನಗರದ ಹೊರವಲಯದ ಬೋಳಮಾನದೊಡ್ಡಿ ರಸ್ತೆಯಲ್ಲಿರುವ ಕ್ವಾರೆಂಟೈನ್ ಕೇಂದ್ರದಲ್ಲಿ ಕ್ವಾರಂಟೈನ್ನಲ್ಲಿರುವ ಜನರು ಹೊರಗಡೆ ಬಂದು ರಾಜಾರೋಷವಾಗಿ ಓಡಾಡುತ್ತಿದ್ದು, ಇದರಿಂದ ಸುತ್ತಮುತ್ತಲಿನ ಬಡಾವಣೆಯ ಜನರು ಆತಂಕಗೊಂಡಿದ್ದಾರೆ.
ನಗರದ ಹೊರವಲಯದ ಬೋಳಮಾನದೊಡ್ಡಿ ರಸ್ತೆಯಲ್ಲಿರುವ ಕ್ವಾರಂಟೈನ್ ಕೇಂದ್ರದ ಬಳಿ ಈ ದೃಶ್ಯ ಕಂಡು ಬಂದಿದೆ. ಜಿಲ್ಲೆಯಿಂದ ವಲಸೆ ಹೋಗಿ ಮರಳಿ ಬಂದ ಕಾರ್ಮಿಕರಿಗೆ ಜಿಲ್ಲಾಡಳಿತ ಕ್ವಾರಂಟೈನ್ ಮಾಡಿದೆ. ಆದರೆ ಕ್ವಾರಂಟೈನ್ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳು ಇಲ್ಲ ಎನ್ನುವ ಕಾರಣಕ್ಕೆ ಜನರು ಅಲ್ಲಿಂದ ಹೊರಗಡೆ ಬಂದು ತಮಗೆ ಬೇಕಾದ ವಸ್ತುಗಳನ್ನು ತೆಗೆದುಕೊಂಡು ಹೋಗುತ್ತಿರುವುದಾಗಿ ತಿಳಿಸಿದ್ದಾರೆ.
ಕ್ವಾರಂಟೈನ್ನಲ್ಲಿ ಇರುವ ಕಾರ್ಮಿಕರು ಅಂಗಡಿಗಳಿಗೆ ಬಂದು ಸಾಬೂನು ಸೇರಿದಂತೆ ನಾನಾ ವಸ್ತುಗಳನ್ನು ಖರೀದಿಸಿ ಹೋಗುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ವಲಸೆ ಕಾರ್ಮಿಕರನ್ನು ಇಲ್ಲಿಯೇ ಕ್ವಾರಂಟೈನ್ ಮಾಡಲಾಗಿದೆ. ಆದರೆ ಕ್ವಾರಂಟೈನ್ನಲ್ಲಿರುವ ಕಾರ್ಮಿಕರು ಹೊರಗಡೆ ಬಂದು ಓಡಾಡುತ್ತಿರುವುದು ಸುತ್ತಲಿನ ಬಡಾವಣೆಯ ಜನರಲ್ಲಿ ಆತಂಕ ಮೂಡಿಸಿದ್ದು, ಅವರನ್ನು ಕ್ವಾರಂಟೈನ್ ಕೇಂದ್ರದಿಂದ ಹೊರಗಡೆ ಬಾರದಂತೆ ನಿಗಾ ವಹಿಸುವಂತೆ ಜನರು ಒತ್ತಾಯಿಸಿದ್ದಾರೆ.