ರಾಯಚೂರು:ಕಲಿಯುಗದ ಕಾಮಧೇನು ಎಂಬ ಪ್ರಸಿದ್ಧಿಯ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ 351ನೇ (ಸಪ್ತರಾತ್ರೋತ್ಸವ) ಆರಾಧನಾ ಮಹೋತ್ಸವಕ್ಕೆ ವೈಭವದ ಚಾಲನೆ ದೊರೆಯಿತು. ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಧ್ವಜಾರೋಹಣ ನೆರವೇರಿಸಿ ಆರಾಧನೆಗೆ ಚಾಲನೆ ಕೊಟ್ಟರು. ಗೋ, ಅಶ್ವ, ಧಾನ್ಯ ಪೂಜೆಗಳನ್ನೂ ಶ್ರೀಗಳು ನೆರವೇರಿಸಿದರು.
ಇದಾದ ಬಳಿಕ ಶ್ರೀಮಠದ ಮುಂಭಾಗದಲ್ಲಿ ನಿರ್ಮಿಸಿರುವ ಮಧ್ವ ದ್ವಾರವನ್ನು ಲೋಕಾರ್ಪಣೆ ಮಾಡಲಾಯಿತು. ಆರಾಧನಾ ಮಹೋತ್ಸವದ ಹಿನ್ನೆಲೆಯಲ್ಲಿ ಶ್ರೀಮಠಕ್ಕೆ ವಿಶೇಷ ಹೂವಿನ ಅಲಂಕಾರ, ಝಗಮಗಿಸುವ ವಿದ್ಯುದ್ದೀಪ ಮಾಡಲಾಗಿತ್ತು.