ರಾಯಚೂರು: ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನ ಮುನ್ನಡೆಸಲು ರಾಹುಲ್‌ಗಾಂಧಿ ಎಐಸಿಸಿ ಅಧ್ಯಕ್ಷರಾಗುವುದು ಸೂಕ್ತವೆಂದು ಎಐಸಿಸಿ ಕಾರ್ಯದರ್ಶಿ ಎನ್.ಎಸ್.ಬೋಸರಾಜ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ರಾಯಚೂರಿನ ಈಟಿವಿ ಭಾರತ್‌ನೊಂದಿಗೆ ಮಾತನಾಡಿದ ಅವರು, ದಿವಂಗತ ನೆಹರು ಕಾಲದಿಂದಲೂ ಗಾಂಧಿ ಕುಟುಂಬದ ಮೇಲೆ ದೇಶದ ಜನತೆ ನಂಬಿಕೆಯಿಟ್ಟಿದ್ದು, ಗಾಂಧಿ ಕುಟುಂಬದ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುವುದು ಒಳಿತು. ಸೋನಿಯಾ ಗಾಂಧಿಯವರಿಗೆ ಕಾಂಗ್ರೆಸ್ ಮುನ್ನಡೆಸಬೇಕು ಎನ್ನುವುದು ಎಲ್ಲರ ಅಭಿಪ್ರಾಯವಾಗಿದೆ. ಆದರೆ ಅವರ ಆರೋಗ್ಯ ಸಮಸ್ಯೆಯಿಂದಾಗಿ ಅಧ್ಯಕ್ಷರನ್ನ ಬದಲಾಯಿಸಬೇಕಾಗಿದೆ.