ರಾಯಚೂರು: ಕಾಲುವೆಗೆ ಬಿದ್ದು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ರಾಯಚೂರು: ತುಂಗಭದ್ರಾ ಎಡದಂಡೆ ನಾಲೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ - ರಾಯಚೂರು ಲೇಟೆಸ್ಟ್ ಕ್ರೈಂ ನ್ಯೂಸ್
ಸಿಂಧನೂರು ತಾಲೂಕಿನ ತುರುವಿಹಾಳ ಗ್ರಾಮದ ತುಂಗಭದ್ರಾ ಎಡದಂಡೆ ನಾಲೆಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಸಿಂಧನೂರು ಮೂಲದ ಲಲಿತ್ ನಾಹರ್(48) ಮೃತ ವ್ಯಕ್ತಿ.
ಲಲಿತ್ ನಾಹರ್
ಜಿಲ್ಲೆಯ ಸಿಂಧನೂರು ತಾಲೂಕಿನ ತುರುವಿಹಾಳ ಗ್ರಾಮದ ತುಂಗಭದ್ರಾ ಎಡದಂಡೆ ನಾಲೆಯಲ್ಲಿ ಘಟನೆ ಸಂಭವಿಸಿದೆ. ಸಿಂಧನೂರು ಮೂಲದ ಲಲಿತ್ ನಾಹರ್(48) ಮೃತ ವ್ಯಕ್ತಿ. ಸಿಂಧನೂರು ಮೂಲದ ನಿವಾಸಿಯಾಗಿರುವ ಲಲಿತ್ ನಾಹರ್, ನಿನ್ನೆ ತುಂಗಭದ್ರಾ ಎಡದಂಡೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರೆ ಎನ್ನಲಾಗಿದೆ. ಸದ್ಯ ನಾಲೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದೆ.
ವ್ಯವಹಾರಿಕ ನಷ್ಟವೇ ಘಟನೆಗೆ ಕಾರಣವೆಂದು ಮೇಲ್ನೋಟಕ್ಕೆ ಕಂಡು ಬಂದಿದ್ದು, ತನಿಖೆ ನಡೆಸಲಾಗುತ್ತಿದೆ. ಈ ಸಂಬಂಧ ತುರುವಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.