ರಾಯಚೂರು :ಇಲ್ಲಿನರಾಯಚೂರು ಕೃಷಿ ವಿಶ್ವವಿದ್ಯಾಲಯದ 11ನೇ ಘಟಿಕೋತ್ಸವದಲ್ಲಿ ಕೇರಳದ ಆಟೋಡ್ರೈವರ್‌ವೊಬ್ಬರ ಪುತ್ರಿ 6 ಚಿನ್ನದ ಪದಕಗಳನ್ನ ಮುಡಿಗೇರಿಸಿಕೊಂಡಿದ್ದಾರೆ.
ಕೆ. ಸುರೇಶ್ ಕುಮಾರ್ ಎಂಬುವರ ಪುತ್ರಿ ಗೀತಾ ಟಿ ವಿ ಅವರು ಪದವಿಯಲ್ಲಿ 6 ಚಿನ್ನದ ಪದಕ ಪಡೆದು ಸಾಧನೆ ಮಾಡಿದ್ದಾರೆ. ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಇಂದು ನಡೆದ 11ನೇ ಘಟಿಕೋತ್ಸವ ಸಮಾರಂಭಕ್ಕೆ ರಾಜ್ಯಪಾಲ ತಾವರ್ಚಂದ್ ಗೆಹ್ಲೋಟ್ ಚಾಲನೆ ನೀಡಿದರು. ನಂತರ ಅವರು ಸಾಧಕಿಗೆ ಚಿನ್ನದ ಪದಕ ಹಾಗೂ ಪ್ರಮಾಣ ಪತ್ರ ನೀಡಿ ಗೌರವಿಸಿದರು.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಸಾಧಕಿ ಗೀತಾ ಟಿ ವಿ ಅವರು, 'ನನಗೆ ಚಿನ್ನದ ಪದಕ ಬಂದಿರುವುದು ತುಂಬಾ ಸಂತೋಷವಾಗಿದೆ. ನಾನು ಕೇರಳ ರಾಜ್ಯದಿಂದ ಬಂದಿದ್ದೇನೆ. ನನ್ನ ಈ ಸಾಧನೆಗೆ ಶಿಕ್ಷಕರು ಹಾಗೂ ಪೋಷಕರ ಪ್ರೋತ್ಸಾಹವೇ ಕಾರಣ. ಈ ಸಂದರ್ಭದಲ್ಲಿ ಅವರಿಗೆ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ' ಎಂದರು.