ರಾಯಚೂರು :ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿರುವ ಅಡ್ಡೆ ಮೇಲೆ ನಗರದ ಸದರ್ ಬಜಾರ್ ಪೊಲೀಸರು ದಾಳಿ ಮಾಡಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಜಿಲಾನಿ ಪಾಷ, ಅನ್ಸಾರ್ ಮಹ್ಮದ್, ಖದೀರ್ ಪಾಷ ಮತ್ತು ಮೊಹ್ಮದ್ ಖಾಲೀದ್ ಪಾಷ ಎಂಬುವರನ್ನು ಬಂಧಿಸಿ, ಅವರಿಂದ ₹ 10,300 ನಗದು ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳು ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಗಳು ನಡೆಯುತ್ತಿರುವ ಹಿನ್ನೆಲೆ ಪೂರ್ವ ವೃತ್ತ ವ್ಯಾಪ್ತಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದರು. ಈ ಬಗ್ಗೆ ಮಾಹಿತಿ ದೊರೆಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕ್ಕಂ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹರಿಬಾಬು, ಡಿವೈಎಸ್‌ಪಿ ಶಿವನಗೌಡ ಪಾಟೀಲ್ ರವರ ಮಾರ್ಗದರ್ಶನದಲ್ಲಿ ಸಿಪಿಐ ಪೂರ್ವ ವೃತ್ತ ಎಂ ಡಿ ಫಸಿಯುದ್ದೀನ್, ಪಿಎಸ್‌ಐ ಮಂಜುನಾಥ ಹಾಗೂ ಸಿಬ್ಬಂದಿಯನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿದೆ.
5 ಜನ ಆರೋಪಿತರ ವಿರುದ್ಧ ಸದರಬಜಾರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.