ರಾಯಚೂರು: ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ಸಭೆ ನಡೆಸಿದ್ರು.
ರಾಯಚೂರಿನಲ್ಲಿ ಕೊರೊನಾ ಜಾಗೃತಿ ಸಭೆ ನಡೆಸಿದ ಬಿ.ಶ್ರೀರಾಮುಲು - ರಾಯಚೂರು ಸುದ್ದಿ
ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ಸಭೆ ನಡೆಸಿ, ಮಾಹಿತಿ ಪಡೆದುಕೊಂಡರು.
ಕೊರೊನಾ ಹಿನ್ನೆಲೆಯಲ್ಲಿ, ಸಭೆಯಲ್ಲಿ ಜಿಲ್ಲೆಯಿಂದ ಇದುವರೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಸಭೆಯ ಬಳಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕಿನ ಭೀತಿಯಿಂದ ಯಾವುದೇ ಖಾಸಗಿ ಆಸ್ಪತ್ರೆ, ಕ್ಲಿನಿಕ್ ಮುಚ್ಚುವಂತಿಲ್ಲ. ಅವರ ಬಳಿ ತೆರಳುವ ಎಲ್ಲ ರೋಗಿಗಳಿಗೆ ಚಿಕಿತ್ಸೆ ನೀಡುವ ಕೆಲಸ ಮಾಡಬೇಕು. ಕ್ಲಿನಿಕ್, ಆಸ್ಪತ್ರೆ ಮುಚ್ಚಿದೆ ಅಂತಹವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸುವ ಮೂಲಕ ಲೈಸನ್ಸ್ ರದ್ದುಗೊಳಿಸಲಾಗುವುದು ಎಂದು ಎಚ್ಚರಿಸಿದ್ರು. ರಾಜ್ಯದಲ್ಲಿ ಒಟ್ಟು 5061 ಜನರ ಗಂಟಲಿನ ದ್ರವವನ್ನ ಪರೀಕ್ಷೆ ಮಾಡಲಾಗಿದೆ. ಇದರಲ್ಲಿ 146 ಜನರಿಗೆ ಪಾಸಿಟಿವ್ ಬಂದಿದ್ದು, 11 ಜನರು ಗುಣಮುಖವಾಗಿದ್ದಾರೆ. 4 ಜನ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ರು. ವೈರಸ್ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಜಾಗೃತಿ ಕರ್ನಾಟಕ ಎಂಬ ಯೂಟ್ಯೂಬ್ ಲಾಂಚ್ ಮಾಡಲಾಗಿದೆ ಎಂದರು.
ಇನ್ನು, ತುಂಗಭದ್ರಾ ಜಲಾಶಯದ ವ್ಯಾಪ್ತಿಗೆ ಬರುವ ಕಾಲುವೆ ಎರಡನೇ ಬೆಳೆಗೆ ಹಾಗೂ ಕುಡಿವ ನೀರಿಗೆ ಸಮಸ್ಯೆಯಿಲ್ಲವೆಂದು ತಿಳಿಸಿದ್ರು. ಸಭೆಯ ಬಳಿಕ ನಗರದ ಓಪೆಕ್‌ನಲ್ಲಿ ಕೊರೊನಾ ಸೋಂಕಿತರಿಗೆ ನಿರ್ಮಿಸಿರುವ ವಾರ್ಡ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.