ರಾಯಚೂರು: ಕರ್ತವ್ಯದಿಂದ ವಜಾಗೊಂಡ ಬಿಎಂಟಿಸಿ ಚಾಲಕ ಕಂ ನಿರ್ವಾಹಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ವೀರಾಪುರ ಗ್ರಾಮದಲ್ಲಿ ನಡೆದಿದೆ. ವಿನೋದ್ ಕುಮಾರ್ (42) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ರಾಯಚೂರು: ಆತ್ಮಹತ್ಯೆಗೆ ಶರಣಾದ ಬಿಎಂಟಿಸಿ ಚಾಲಕ ಕಂ ನಿರ್ವಾಹಕ
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ವೀರಾಪುರ ಗ್ರಾಮದಲ್ಲಿ ಬಿಎಂಟಿಸಿ ಚಾಲಕ ಕಂ ನಿರ್ವಾಹಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕರ್ತವ್ಯದಿಂದ ವಜಾಗೊಂಡಿದ್ದರಿಂದ ಕೆಲಸವಿಲ್ಲದೇ ಅತಂತ್ರ ಸ್ಥಿತಿಗೆ ಸಿಲುಕಿದ್ದರು. ಮಾನಸಿಕವಾಗಿ ಕುಗ್ಗಿ ನಿನ್ನೆ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬಿಎಂಟಿಸಿಯಲ್ಲಿ ಚಾಲಕ ಹಾಗೂ ನಿರ್ವಾಹಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ, ವಿನೋದ್ ಕುಮಾರ್ ಮುಷ್ಕರದಲ್ಲಿ ಭಾಗವಹಿಸಿದ್ದರು. ಈ ಹಿನ್ನೆಲೆ ಕರ್ತವ್ಯದಿಂದ ವಜಾಗೊಳಿಸಲಾಗಿತ್ತು. ಕೆಲಸವಿಲ್ಲದೇ ತಮ್ಮ ಸ್ವಗ್ರಾಮಕ್ಕೆ ಮರಳಿ ಅಲ್ಲೂ ಕೆಲಸವಿಲ್ಲದೆ ಅತಂತ್ರ ಸ್ಥಿತಿಗೆ ಸಿಲುಕಿದ್ದರು. ಮಾನಸಿಕವಾಗಿ ಕುಗ್ಗಿ ನಿನ್ನೆ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಮಾದಪ್ಪನ ಬೆಟ್ಟದ ವಸತಿಗೃಹದಲ್ಲಿ ಚಿನ್ನದ ಸರ ಬೀಳಿಸಿಕೊಂಡಿದ್ದ ಟೆಕ್ಕಿ ಪತ್ನಿ: ಪ್ರಾಮಾಣಿಕತೆ ಮೆರೆದ ನೌಕರ