ರಾಯಚೂರು :ಜಿಲ್ಲೆಯಲ್ಲಿ ಜಲಧಾರೆ ಕುಡಿಯುವ ನೀರಿನ ಯೋಜನೆ ಮೂಲಕ 1406 ಗ್ರಾಮಗಳ ಜನವಸತಿ ಪ್ರದೇಶಗಳಿಗೆ ನೀರು ತಲುಪಿಸುವ ಕಾರ್ಯಯೋಜನೆ ಹಾಕಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೊಠಡಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಜಲಾಧಾರೆ ಯೋಜನೆಯ ಸಮಾಲೋಚಕರೊಂದಿಗೆ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ಜಲಧಾರೆ ಯೋಜನೆಯು 159.50 ಎಂಎಲ್‌ಡಿ ( 2.06) ಟಿಎಂಸಿ ನೀರನ್ನು ನಾರಾಯಣಪುರ ಜಲಾಶಯದಿಂದ ಪಡೆದು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಸಮಗ್ರ ಕುಡಿಯುವ ನೀರಿನ ಯೋಜನೆಯನ್ನ ರಾಜ್ಯ ಸರ್ಕಾರ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಿದೆ.