ರಾಯಚೂರು: ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ರಾಯಚೂರು ವತಿಯಿಂದ ಎಫ್ಕೆಸಿಸಿಐ ಪ್ರಥಮ ವಿಶೇಷ ಕಾರ್ಯಕಾರಿ ಸಮಿತಿ ಸಭೆ ಹಾಗೂ ತಾಂತ್ರಿಕ ಅಧಿವೇಶನಗಳ ಸಮಾರಂಭ ಹಾಗೂ ಕಲ್ಯಾಣ ಕರ್ನಾಟಕ ವಾಣಿಜ್ಯೋದ್ಯಮಿಗಳ ಕಾರ್ಯಾಗಾರ ಇಂದು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆಯಿತು.
ಕಲ್ಯಾಣ ಕಾರ್ನಾಟಕ ಭಾಗದ ಸಮಸೈಗಳನ್ನು ಬಗೆಹರಿಸಿ: ಸರ್ಕಾರಕ್ಕೆ ಎಫ್ಕೆಸಿಸಿ ಮನವಿ
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ರಾಯಚೂರು ವತಿಯಿಂದ ಎಫ್ಕೆಸಿಸಿಐ ಪ್ರಥಮ ವಿಶೇಷ ಕಾರ್ಯಕಾರಿ ಸಮಿತಿ ಸಭೆ ಹಾಗೂ ತಾಂತ್ರಿಕ ಅಧಿವೇಶನಗಳ ಸಮಾರಂಭ ಹಾಗೂ ಕಲ್ಯಾಣ ಕರ್ನಾಟಕ ವಾಣಿಜ್ಯೋದ್ಯಮಿಗಳ ಕಾರ್ಯಾಗಾರ ಇಂದು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆಯಿತು.
ಎಫ್ಕೆಸಿಸಿಐ ರಾಜ್ಯಾಧ್ಯಕ್ಷ ಸಿ.ಆರ್.ಜನಾರ್ಧನ ಮಾತನಾಡಿ, ರಾಯಚೂರು ಜಿಲ್ಲೆಯಲ್ಲಿ ಅಕ್ಕಿ ಗಿರಣಿ, ಹತ್ತಿ ಜಿನ್ನಿಂಗ್ ಫ್ಯಾಕ್ಟರಿ, ಕೆಮಿಕಲ್ ಫ್ಯಾಕ್ಟರಿ, ಹೋಟೆಲ್ ಉದ್ಯಮ ಸೇರಿದಂತೆ ಇತರೆ ಕೈಗಾರಿಕೆಗಳು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರಕ್ಕೆ ಕೋಟ್ಯಂತರ ರೂ. ಟ್ಯಾಕ್ಸ್ ಪೇ ಮಾಡಿ ಖಜಾನೆ ತುಂಬಿಸುತ್ತಿವೆ. ಆದ್ರೆ ಇತ್ತೀಚಿನ ವರ್ಷಗಳಿಂದ ಹಲವಾರು ಸಮಸ್ಯೆಗಳಿಂದ ನಲುಗುತ್ತಿವೆ. ಇದಕ್ಕೆ ಸರ್ಕಾರ ಅಗತ್ಯ ನೆರವು ನೀಡಿ ಮುನ್ನಡೆಸಬೇಕು ಎಂದರು. ಅಲ್ಲದೇ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಸಾಕಷ್ಟು ಕೈಗಾರಿಕೆಗಳಿದ್ದು, ಯುವಕರಿಗೆ ಉದ್ಯೋಗ ಸಹ ನೀಡುತ್ತಿವೆ. ಆದ್ರೆ ನೂತನ ಕೈಗಾರಿಕಾ ನೀತಿಯಿಂದಾಗಿ ಸಾಕಷ್ಟು ಸಮಸ್ಯೆ ಎದುರಾಗಿದೆ. ಈ ಭಾಗದ ಕೈಗಾರಿಕೆಗಳಿಗೆ ಸಮರ್ಪಕ ವಿದ್ಯುತ್, ನೀರು ಹಾಗೂ ಇತರೆ ಮೂಲಭೂತ ಸೌಕರ್ಯ ಸಿಗುತ್ತಿಲ್ಲ. ಆದ್ದರಿಂದ ಇಲ್ಲಿ ಕೈಗಾರಿಕಾ ಸ್ನೇಹಿ ವಾತಾವರಣ ನಿರ್ಮಿಸಲು ಮುಂದಾಗಬೇಕಿದೆ ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
ವಿಷ್ಣುಕಾಂತ್ ಭೂತಡಾ, ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್, ಜಿಲ್ಲಾ ವಾಣಿಜ್ಯೋದ್ಯಮಿಗಳ ಸಂಘದ ಅಧ್ಯಕ್ಷ ತ್ರಿವಿಕ್ರಮ ಜೋಶಿ, ಕಮಲ ಕುಮಾರ್ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಉದ್ಯಮಿಗಳು ಭಾಗವಹಿಸಿದ್ದರು.
TAGGED:
avb