ರಾಯಚೂರು: ಕೇಂದ್ರ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಜನ ವಿರೋಧಿ ನೀತಿ ಖಂಡಿಸಿ, ಜಿಲ್ಲೆಯ ಜೀವನಾಡಿ ತುಂಗಭದ್ರಾ ಎಡದಂಡೆ ಕಾಲುವೆ ಹಾಗೂ ನಾರಾಯಣಪುರ ಬಲದಂಡೆ ಕಾಲುವೆ ಮುಖಾಂತರ ರೈತರ ಬೆಳೆಗಳಿಗೆ ಬೇಸಿಗೆ ನೀರು ಹರಿಸಲು ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆ ಕರೆಯದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಹಾಗೂ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕೇಂದ್ರ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಕಾಂಗ್ರೆಸ್ನಿಂದ ಪ್ರತಿಭಟನೆ - ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ
ಕೇಂದ್ರ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಜನ ವಿರೋಧಿ ನೀತಿ ಖಂಡಿಸಿ ರಾಯಚೂರು ಜಿಲ್ಲೆಯ ಜೀವನಾಡಿ ತುಂಗಭದ್ರಾ ಎಡದಂಡೆ ಕಾಲುವೆ ಹಾಗೂ ನಾರಾಯಣಪುರ ಬಲದಂಡೆ ಕಾಲುವೆ ಮುಖಾಂತರ ರೈತರ ಬೆಳೆಗಳಿಗೆ ಬೇಸಿಗೆ ನೀರು ಹರಿಸಲು ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆ ಕರೆಯದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಖಂಡಿಸಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಹಾಗೂ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಗಂಜ್ ರಸ್ತೆ, ಚಂದ್ರಮೌಳೇಶ್ವರ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ದಿನೇಶ್ ಗುಂಡೂರಾವ್, ಈಶ್ವರ್ ಖಂಡ್ರೆ ತೆರೆದ ವಾಹನದಲ್ಲಿ ಪ್ರತಿಭಟನೆ ನಡೆಸಿದ್ದು, ಇತ್ತ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ಮೋದಿಯವರ ಅಣಕು ಶವಯಾತ್ರೆ ಮಾಡಿ ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ಆರ್ಥಿಕ ಪರಿಸ್ಥಿತಿ ದಿವಾಳಿ ಎದ್ದಿದೆ. ಆರ್ಥಿಕ ತೀರ್ಮಾನ ಕೈಗೊಳ್ಳುವಲ್ಲಿ ವಿಫಲವಾಗಿ ಜನವಿರೋಧಿ ಆಡಳಿತ ನಡೆಸುತ್ತಿದೆ ಎಂದು ದೂರಿದರು. 2014ರಂದು ಆಡಳಿತಕ್ಕೆ ಬಂದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ವಿದೇಶದಲ್ಲಿನ ಕಪ್ಪುಹಣ ವಾಪಸ್ ತಂದು ಪ್ರತಿಯೊಬ್ಬರ ಅಕೌಂಟ್ಗೆ ರೂ.15 ಲಕ್ಷ ಹಾಕುತ್ತೇವೆಂದು ಮೋಸ ಮಾಡಿದೆ. 2 ಕೋಟಿ ಉದ್ಯೋಗ ಸೃಷ್ಟಿಯೂ ಮಾಡಿಲ್ಲ ಎಂದು ದೂರಿದರು.