ರಾಯಚೂರು: ಕೋವಿಡ್ ಆಸ್ಪತ್ರೆಯು ಅವ್ಯವಸ್ಥೆಯಿಂದ ಕೂಡಿದೆ ಎಂದು ಚಿಕಿತ್ಸೆಗೆ ದಾಖಲಾಗಿರುವ ರೋಗಿಗಳು ಆರೋಪಿಸಿದ್ದಾರೆ. ನಗರದ ಒಪೆಕ್ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಮಾಡಲಾಗಿದ್ದು, ಕೊರೊನಾ ಸೋಂಕಿತರಿಗೆ ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಯಚೂರು ಕೋವಿಡ್ ಆಸ್ಪತ್ರೆ ಅವ್ಯವಸ್ಥೆಯ ಆಗರ: ಸೋಂಕಿತರ ಆರೋಪ..! - Covid Hospital Problem
ರಾಯಚೂರಿನ ಕೋವಿಡ್ ಆಸ್ಪತ್ರೆಯು ಅವ್ಯವಸ್ಥೆಯಿಂದ ಕೂಡಿದೆ ಎಂದು, ಚಿಕಿತ್ಸೆಗೆ ದಾಖಲಾಗಿರುವ ರೋಗಿಗಳು ಆರೋಪಿಸಿದ್ದಾರೆ.
ಕೋವಿಡ್ ಆಸ್ಪತ್ರೆ ಅವ್ಯವಸ್ಥೆಯ ಬಗ್ಗೆ ಸೋಂಕಿತರ ಆರೋಪ
ಆಸ್ಪತ್ರೆಯು ಸಂಪೂರ್ಣವಾಗಿ ಅವ್ಯವಸ್ಥೆ ಅಗರವಾಗಿದ್ದು, ರೋಗಿಗಳಿಗೆ ಸರಿಯಾದ ವ್ಯವಸ್ಥೆಯಿಲ್ಲ. ರೋಗಿಗಳನ್ನು ವೈದ್ಯರು ಹೇಗಿದ್ದೀಯಾ ಎಂದು ಕೇಳುವುದಿಲ್ಲ. ಕುಡಿಯುವ ನೀರಿನ ವ್ಯವಸ್ಥೆ, ಚಹಾ ಸೇರಿದಂತೆ ಅವಶ್ಯಕ ಸವಲತ್ತುಗಳನ್ನು ಸರಿಯಾಗಿ ಕಲ್ಪಿಸುತ್ತಿಲ್ಲ ಎಂದು ಆರೋಪಿಸಲಾಗಿದೆ.
ಸೋಂಕಿತರ ಹೊರಗಡೆ ಬಾರದಂತೆ ನೋಡಿಕೊಳ್ಳಬೇಕು. ಆದ್ರೆ ಸೋಂಕಿತರು ಆಸ್ಪತ್ರೆಯ ಒಳಗಿನಿಂದ ಹೊರಗಡೆ ಓಡಾಡುವ ದೃಶ್ಯ ಕಂಡು ಬರುತ್ತಿದೆ. ಈ ದೃಶ್ಯವನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ರೋಗಿಗಳಿಗೆ ಅಗತ್ಯ ಸೌಕರ್ಯಗಳನ್ನ ಕಲ್ಪಿಸುವ ವ್ಯವಸ್ಥೆಯನ್ನನ್ನು ಮಾಡಬೇಕೆಂದು ಒತ್ತಾಯಿಸಿದ್ದಾರೆ.