ಕರ್ನಾಟಕ

karnataka

ETV Bharat / state

ಅಧಿಕಾರಿಗಳು ಹೈ ಆಲರ್ಟ್ ಆಗಿರುವಂತೆ ಜಿಲ್ಲಾಧಿಕಾರಿ ಸೂಚನೆ - Raichur corona conditions

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಅಧಿಕಾರಿ ವರ್ಗ ಹೈ ಅಲರ್ಟ್ ಆಗಿರುವಂತೆ ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್ ತಿಳಿಸಿದ್ದಾರೆ.

Meeting in raichur
Meeting in raichur

By

Published : Jul 16, 2020, 11:32 PM IST

ರಾಯಚೂರು:ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಅಧಿಕಾರಿ ವರ್ಗ ಹೈ ಅಲರ್ಟ್ ಆಗಿರುವಂತೆ ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ವಿಡಿಯೋ ಕಾನ್ಫರೆನ್ಸ್ ಹಾಲ್​ನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಏರಿಕೆಯಾಗುತ್ತಿವೆ. ಇದನ್ನು ಹತೋಟಿಗೆ ತರಬೇಕಾಗಿದೆ. ಹೀಗಾಗಿ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಅಧಿಕಾರಿಗಳು ಹೈ ಅಲರ್ಟ್ ಆಗಿ, ವೈರಸ್ ನಿಯಂತ್ರಿಸಲು ಕಟ್ಟೆಚ್ಚರ ವಹಿಸಬೇಕು ಎಂದು ತಿಳಿಸಿದರು.

ರಾಯಚೂರು, ಮಾನ್ವಿ, ಸಿಂಧನೂರು, ಲಿಂಗಸೂಗೂರು ಮತ್ತು ದೇವದುರ್ಗ ತಾಲೂಕಿನಲ್ಲಿ ಇಂದು ಒಂದೇ ದಿನ ಅತ್ಯಧಿಕ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಸೋಂಕಿತರಿಗೆ ಚಿಕಿತ್ಸೆ, ಔಷಧಿ, ಆಹಾರ ಸೇರಿದಂತೆ ಎಲ್ಲಾ ಸೌಲಭ್ಯವನ್ನು ಸಮಪರ್ಕವಾಗಿ ಕಲ್ಪಿಸಬೇಕಾಗಿದೆ. ತಾಲೂಕು ಆಸ್ಪತ್ರೆಗಳಲ್ಲಿ ಆಂಬ್ಯುಲೆನ್ಸ್ ಕೊರತೆಯಾಗದಂತೆ ನಿಗಾ ವಹಿಸಬೇಕಿದ್ದು, ತಾಲೂಕು ಆರೋಗ್ಯ ಅಧಿಕಾರಿಗಳು ಸ್ಥಳದಲ್ಲಿಯೇ ಇರಬೇಕೆಂದರು.

ಮಾನ್ವಿ ತಾಲೂಕಿನಲ್ಲಿ ಇಂದು ಒಂದೇ ದಿನ 30ಕ್ಕೂ ಅಧಿಕ ಪಾಸಿಟಿವ್ ಪ್ರಕರಣ ದೃಢಪಟ್ಟಿದ್ದು, ಸೋಂಕಿತರನ್ನು ಪತ್ತೆಹಚ್ಚಿ ಅವರನ್ನು ತಕ್ಷಣವೇ ರಿಮ್ಸ್ ಆಸ್ಪತ್ರೆಯ ಐಸೋಲೇಷನ್ ವಾರ್ಡ್​​ಗೆ ಸ್ಥಳಾಂತರಿಸಬೇಕು. ಆಸ್ಪತ್ರೆಗಳಲ್ಲಿ ಎಕ್ಸ್​ರೇ, ಇಸಿಜಿಯಂತಹ ಸಲಕರಣೆಗಳು ಸುಸ್ಥಿತಿಯಲ್ಲಿರಬೇಕು. ಇಲ್ಲದಿದ್ದರೆ ಹೊಸದಾಗಿ ಅವುಗಳನ್ನು ಖರೀದಿಸುವಂತೆ ತಹಶೀಲ್ದಾರ್​​, ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.

ಸಿಂಧನೂರು ತಾಲೂಕು ಆಸ್ಪತ್ರೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಆರೋಗ್ಯಾಧಿಕಾರಿಗಳು ಕರ್ತವ್ಯಕ್ಕೆ ಬಾರದೆ ಗೈರು ಹಾಜರಾಗುತ್ತಿದ್ದಾರೆಂದು ಸಿಂಧನೂರು ತಹಶೀಲ್ದಾರರು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದಾಗ, ಜಿಲ್ಲಾಧಿಕಾರಿಗಳು ಅಸಮಾಧಾನಗೊಂಡರು. ಗೈರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಿ, ಅವರನ್ನು ತಕ್ಷಣವೇ ಹುದ್ದೆಯಿಂದ ಬಿಡುಗಡೆ ಮಾಡುವಂತೆ ಜಿಲ್ಲಾ ವೈದ್ಯಾಧಿಕಾರಿ ಡಾ.ರಾಮಕೃಷ್ಣ ನಿರ್ದೇಶನ ನೀಡಿದರು.

ಸಿಂಧನೂರು ನಗರದಲ್ಲಿ ಈಗಾಗಲೇ ಲಾಕ್​ಡೌನ್ ಜಾರಿಯಲ್ಲಿದೆ, ಆದರೆ ತಾಲೂಕು ಆರೋಗ್ಯಾಧಿಕಾರಿಗಳು ಕೇಂದ್ರಸ್ಥಾನದಲ್ಲಿ ಇರದೆ ಗೈರು ಹಾಜರಾಗಿದ್ದಾರೆ. ಇದು ಅಧಿಕಾರಿಗಳಿಗೆ ಶೋಭೆ ತರುವ ಸಂಗತಿಯಲ್ಲ, ಬೇಜವಾಬ್ದಾರಿತನದ ವರ್ತನೆ ಸರಿಯಲ್ಲ ಎಂದರು.

ABOUT THE AUTHOR

...view details