ರಾಯಚೂರು: ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಯುವಕನೊಬ್ಬ ಮೃತಪಟ್ಟ ಘಟನೆ ರಾಯಚೂರಿನಲ್ಲಿ ನಡೆದಿದೆ.
ರಾಯಚೂರು: ಅನಾರೋಗ್ಯದಿಂದ ಯುವಕ ಸಾವು - ರಾಯಚೂರು
ರಾಯಚೂರಿನ ಶಕ್ತಿನಗರದ 21 ವರ್ಷದ ಯುವಕ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. ಯುವಕನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ರಾಯಚೂರಿನ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು.
ರಾಯಚೂರಿನ ಶಕ್ತಿನಗರದ ಆರ್ಟಿಪಿಎಸ್ ಇಂಜಿನಿಯರ್ ಒಬ್ಬರ ಪುತ್ರ 21 ವರ್ಷದ ಯುವಕ ಮೃತಪಟ್ಟಿದ್ದಾನೆ. ಯುವಕನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ರಾಯಚೂರಿನ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಯುವಕ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಯುವಕ ಬೇರೆ ಯಾವುದೋ ಕಾಯಿಲೆಯಿಂದ ಬಳಲುತ್ತಿದ್ದಾನಾ ಅಥವಾ ಕೊರೊನಾ ಸೋಂಕಿನಿಂದಾಗಿಯೇ ಮೃತಪಟ್ಟಿದ್ದಾನೆಯೇ ಎಂಬುದರ ಕುರಿತಂತೆ ತಜ್ಞರ ಸಮಿತಿ ಸಮಾಲೋಚಿಸಿ ನಿರ್ಧಾರ ಕೈಗೊಳ್ಳಲಿದೆ. ಸದ್ಯ ಮೃತ ಯುವಕನ ಶವ ಸಂಸ್ಕಾರವನ್ನು ಕೋವಿಡ್ ಮಾರ್ಗಸೂಚಿ ಅನ್ವಯ ನಡೆಸುವಂತೆ ಜಿಲ್ಲಾಡಳಿತ ಸೂಚಿಸಿದೆ.