ರಾಯಚೂರು: ಕೊರೊನಾ ಸೋಂಕಿನ ಭೀತಿಯಿಂದಾಗಿ ದೂರುಗಳನ್ನು ಸ್ವೀಕರಿಸಲು ಹಲವು ಅಧಿಕಾರಿಗಳನ್ನ ಕೋವಿಡ್-19 ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿತ್ತು. ಹೀಗಾಗಿ ಸಾರ್ವಜನಿಕರು ತೊಂದರೆ ಅನುಭವಿಸುವಂತೆ ಆಗಿತ್ತು. ಆದ್ರೆ ಸಾರ್ವಜನಿಕರ ದೂರುಗಳನ್ನ ಸ್ವೀಕರಿಸುವುದಕ್ಕೆ ರಾಯಚೂರು ಜಿಲ್ಲಾಡಳಿತ ಈಗ ಪ್ರತ್ಯೇಕ ಕೌಂಟರ್‌ಗಳನ್ನ ಆರಂಭಿಸಿದೆ.
ಸಾರ್ವಜನಿಕರ ದೂರುಗಳಿಗೆಂದೇ ಪ್ರತ್ಯೇಕ ಕೌಂಟರ್ ತೆರೆದ ರಾಯಚೂರು ಜಿಲ್ಲಾಡಳಿತ - ರಾಯಚೂರು ಜಿಲ್ಲಾಡಳಿತ
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ದೂರುಗಳನ್ನು ಸ್ವೀಕರಿಸುವುದಕ್ಕೆ ಪ್ರತ್ಯೇಕ ಕೌಂಟರ್ ತೆರೆದಿದ್ದು, ಅಲ್ಲಿ ಅವಶ್ಯವಿರುವ ಸಿಬ್ಬಂದಿಯನ್ನು ಸಹ ನಿಯೋಜನೆ ಮಾಡಲಾಗಿದೆ.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ದೂರುಗಳನ್ನು ಸ್ವೀಕರಿಸುವುದಕ್ಕೆ ಪ್ರತ್ಯೇಕ ಕೌಂಟರ್ ತೆರೆದಿದ್ದು, ಅಲ್ಲಿ ಅವಶ್ಯವಿರುವ ಸಿಬ್ಬಂದಿಯನ್ನು ಸಹ ನಿಯೋಜನೆ ಮಾಡಲಾಗಿದೆ. ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆ, ಭೂ ವಿವಾದ, ರಸ್ತೆ ದುರಸ್ತಿ, ಆಸ್ತಿಪಾಸ್ತಿ ವಿಚಾರ, ಸರಕಾರದ ಯೋಜನೆಗಳು ದೊರೆಯದೆ ಇರುವುದು ಹಾಗೂ ಸಂಘಟನೆಗಳ ದೂರುಗಳನ್ನ ಕೌಂಟರ್‌ನಲ್ಲಿ ಸ್ವೀಕರಿಸಲಾಗುತ್ತಿದೆ. ಆ ಬಳಿಕ ಸಂಬಂಧಿಸಿದ ಇಲಾಖೆಯ ದೂರಿನ ಆಧಾರದ ಮೇಲೆ ಜಿಲ್ಲಾ ಮಟ್ಟದ ದೂರುಗಳನ್ನು ಸಂಬಂಧಿಸಿದ ಇಲಾಖೆಗೆ ರವಾನಿಸುವ ಕ್ರಮ ಕೈಗೊಳ್ಳಲಾಗುತ್ತಿದೆ.
ರಾಜ್ಯ ಮಟ್ಟದ ದೂರುಗಳು ಬಂದರೆ ಸಂಬಂಧಪಟ್ಟ ಇಲಾಖೆಯವರಿಗೆ ರವಾನಿಸಲಾಗುತ್ತಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಹಲವು ಇಲಾಖೆಯ ಅಧಿಕಾರಿಗಳನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ. ಹೀಗಾಗಿ ಸಾರ್ವಜನಿಕರು ದೂರು ಸಲ್ಲಿಸಲಾಗುತ್ತಿಲ್ಲವೆಂಬ ಕಾರಣಕ್ಕೆ ಅಧಿಕಾರಿಗಳು ಪ್ರತ್ಯೇಕ ಕೌಂಟರ್ ತೆರೆದಿದ್ದಾರೆ. ಕುಡಿಯುವ ನೀರಿನ ಸಮಸ್ಯೆ ಜಿಲ್ಲೆಯಲ್ಲಿ ತಲೆದೋರಿಲ್ಲ. ಆದ್ರೂ ಕುಡಿಯುವ ನೀರಿನ ಸಮಸ್ಯೆಯಾದರೆ 195 ಸಹಾಯವಾಣಿಗೆ ಕರೆ ಮಾಡಿದ್ರೆ, ಸಮಸ್ಯೆ ಪರಿಹರಿಸುವ ಕೆಲಸವಾಗುತ್ತದೆ ಎನ್ನುತ್ತಾರೆ ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್.