ರಾಯಚೂರು :ಮಹಾರಾಷ್ಟ್ರದಲ್ಲಿ ಕೊರೊನಾ ವೈರಾಣುವಿನ ರೂಪಾಂತರವಾಗಿರುವ ಡೆಲ್ಟಾ ಪ್ಲಸ್ ಪ್ರಕರಣಗಳು ದಿನೇದಿನೆ ಹೆಚ್ಚಾಗುತ್ತಿರುವುದರಿಂದ ರಾಯಚೂರು ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಕೈಗೊಳ್ಳುತ್ತಿದೆ.
ಜಿಲ್ಲೆಯ ಗಡಿ ಭಾಗದಲ್ಲಿ ತಪಾಸಣಾ ಕೇಂದ್ರಗಳನ್ನು ಆರಂಭಿಸಿ, ಒಟ್ಟು 22 ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಒಟ್ಟು 11 ಚೆಕ್ ಪೋಸ್ಟ್ಗಳಲ್ಲಿ 24 ಗಂಟೆಗಳ ಕಾಲ ಕಡ್ಡಾಯ ತಪಾಸಣೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದ್ದು, ರೈಲು ನಿಲ್ದಾಣ, ಬಸ್ ನಿಲ್ದಾಣದಲ್ಲೂ ಚೆಕ್ಪೋಸ್ಟ್ ನಿರ್ಮಿಸಲಾಗಿದೆ.