ಲಿಂಗಸುಗೂರು:ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಕಟ್ಟಲು ಮುಖಂಡರು ಸಾಮಾಜಿಕ ಜಾಲತಾಣಗಳನ್ನು ಪರಿಣಾಮಕಾರಿಯಾಗಿ ಬಳಕೆ ಮಾಡಬೇಕು ಎಂದು ಕಾಂಗ್ರೆಸ್ ಜಿಲ್ಲಾ ಉಸ್ತುವಾರಿ ಅಸ್ಲಂ ಪಾಷ ಕರೆ ನೀಡಿದರು.
ಲಿಂಗಸುಗೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯ ಅಧ್ಯಕ್ಷತೆ ಅವರು ಮಾತನಾಡಿದ್ದು, ಝೂಮ್ ಆ್ಯಪ್ ಮೂಲಕ ಪಂಚಾಯಿತಿ ಮಟ್ಟದಲ್ಲಿ ಮಾಹಿತಿ ನೀಡಲು ಮುಖಂಡರ ನೇಮಕ ಮಾಡಲಾಗುವುದು ಎಂದರು. ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಸಾಮಾಜಿಕ ಜಾಲತಾಣ ಬಳಸಿಕೊಂಡು ಸುಳ್ಳನ್ನೇ ಸತ್ಯ ಎಂಬಂತೆ ಪ್ರಚಾರ ಮಾಡುತ್ತಿದ್ದಾರೆ. ಈ ಮೂಲಕ ಅಧಿಕಾರದ ಚುಕ್ಕಾಣಿಯನ್ನೂ ಹಿಡಿದಿದ್ದಾರೆ ಎಂದು ಆರೋಪಿಸಿದರು.