ರಾಯಚೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಘೋಷಣೆ ಮಾಡಿದೆ. ಘೋಷಣೆಯಾದ ಪಟ್ಟಿಯಲ್ಲಿ ರಾಯಚೂರು ಜಿಲ್ಲೆಯ ಏಳು ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳ ಅಭ್ಯರ್ಥಿಗಳ ಮಾತ್ರ ಅಂತಿಮಗೊಳಿಸಿದ್ದು, ಒಂದು ಕ್ಷೇತ್ರ ಪೆಂಡಿಂಗ್ ಇರಿಸಿದೆ. ರಾಯಚೂರು ನಗರ, ರಾಯಚೂರು ಗ್ರಾಮೀಣ, ಮಾನವಿ, ಸಿಂಧನೂರು, ಮಸ್ಕಿ, ಲಿಂಗಸೂಗುರು ಹಾಗೂ ದೇವದುರ್ಗ ಏಳು ವಿಧಾನಸಭಾ ಕ್ಷೇತ್ರಗಳಿವೆ. ಇದರಲ್ಲಿ ರಾಯಚೂರು ನಗರಕ್ಕೆ ಹಾಲಿ ಶಾಸಕ ಡಾ. ಶಿವರಾಜ್ ಪಾಟೀಲ್, ರಾಯಚೂರು ಗ್ರಾಮೀಣ ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ್, ಸಿಂಧನೂರು ಕ್ಷೇತ್ರಕ್ಕೆ ಕೆ. ಕರಿಯಪ್ಪ, ಮಸ್ಕಿಗೆ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್, ಲಿಂಗಸೂಗೂರು ಮಾಜಿ ಶಾಸಕ ಮಾನಪ್ಪ ವಜ್ಜಲ್, ದೇವದುರ್ಗಕ್ಕೆ ಹಾಲಿ ಶಾಸಕ ಕೆ. ಶಿವನಗೌಡ ನಾಯಕರಿಗೆ ತನ್ನ ಹುರಿಯಾಳುಗಳಾನ್ನಾಗಿ ಕಣಕ್ಕಿಳಿಸಿದೆ.
ಆದರೆ, ಮಾನ್ವಿ ವಿಧಾನಸಭಾ ಕ್ಷೇತ್ರಕ್ಕೆ ಮಾತ್ರ ಅಭ್ಯರ್ಥಿಯನ್ನು ಘೋಷಣೆ ಮಾಡದೆ ಇರುವುದು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ. ಮಾನ್ವಿಯ ಬಿಜೆಪಿ ಮುಖಂಡ ಗಂಗಾಧರ ನಾಯಕ ಇಲ್ಲಿಯ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಇವರನ್ನು ಮೊದಲ ಹಂತದದಲ್ಲಿ ಪಕ್ಷ ಪರಿಗಣಿಸಿಲ್ಲ. ಅಲ್ಲದೆ ಬೇರೆ ಅಭ್ಯರ್ಥಿಯ ಹುಡುಕಾಟ ನಡೆಸಿದೆ ಎನ್ನಲಾಗಿದೆ. ಜೊತೆಗೆ ಕಾಂಗ್ರೆಸ್ ಪಕ್ಷದಿಂದಲೂ ಅಭ್ಯರ್ಥಿಯ ಟಿಕೆಟ್ ಘೋಷಣೆ ಆಗಿಲ್ಲ. ಹೀಗಾಗಿ ಮಾನ್ವಿ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ಸಿಗದೆ ಅಸಮಾಧಾನಗೊಂಡವರನ್ನು ಗಾಳ ಹಾಕಿ ಕರೆತರುವ ಸಾಧ್ಯತೆಯಿದೆ ಎನ್ನುವ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.
ಇದನ್ನೂ ಓದಿ:ಸವದಿ ಅವರನ್ನು ಕಡೆಗಣಿಸಿಲ್ಲ.. ಮನವೊಲಿಕೆ ಮಾಡುತ್ತೇವೆ: ಶೋಭಾ ಕರಂದ್ಲಾಜೆ