ರಾಯಚೂರು :ಕ್ವಾರಂಟೈನ್ ಕೇಂದ್ರದಿಂದ ಬಿಡುಗಡೆಯಾಗಿದ್ದ 20 ಜನರನ್ನು ಮರಳಿ ಕರೆ ತಂದಿರುವ ಘಟನೆ ರಾಯಚೂರಿನ ದೇವದುರ್ಗದಲ್ಲಿ ನಡೆದಿದೆ.
ಲಾಕ್ಡೌನ್ ಸಡಿಲಿಕೆ ನಿಯಮದ ಪ್ರಕಾರ ಕ್ವಾರಂಟೈನ್ ಅವಧಿಯನ್ನು 7 ದಿನಗಳಿಗೆ ಇಳಿಸಲಾಗಿತ್ತು. ಹೀಗಾಗಿ ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಕ್ವಾರಂಟೈನ್ ಕೇಂದ್ರದಲ್ಲಿನ 20 ಜನರನ್ನು ಪ್ರಾಯೋಗಿಕವಾಗಿ ಬಿಡುಗಡೆ ಮಾಡಲಾಗಿತ್ತು.