ರಾಯಚೂರು:ಕೊರೊನಾ ಸೋಂಕಿತ ಮಹಿಳೆ ಸಾವನ್ನಪ್ಪಿದ್ದಕ್ಕೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಆರೋಪಿಸಿ ಮೃತರ ಕುಟುಂಬದವರು, ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದರು.
ವೈದ್ಯರ ನಿರ್ಲಕ್ಷ್ಯ ಆರೋಪ: ಖಾಸಗಿ ಆಸ್ಪತ್ರೆ ಮುಂದೆ ಪ್ರತಿಭಟನೆ
ಕೊರೊನಾ ಸೋಂಕಿತ ಮಹಿಳೆಗೆ ಸರಿಯಾದ ಚಿಕಿತ್ಸೆ ನೀಡದ ಕಾರಣ ಆಕೆ ಮೃತಪಟ್ಟಿದ್ದು, ಘಟನೆಗೆ ಖಾಸಗಿ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಕುಟುಂಬಸ್ಥರು ಆರೋಪಿ ಪ್ರತಿಭಟನೆ ನಡೆಸಿದ್ರು.
ತಾಲೂಕಿನ ಕವಲದೊಡ್ಡಿ ಗ್ರಾಮದ 35 ವರ್ಷದ ಮಹಿಳೆ ಮೃತಪಟ್ಟಿದ್ದಾಳೆ. ಮಹಿಳೆಯ ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಆರೋಪಿಸಿ ಪ್ರತಿಭಟನೆ ನಡೆಸಲಾಯಿತು. ಅನಾರೋಗ್ಯ ಹಿನ್ನೆಲೆ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು. ಕೊರೊನಾ ಪರೀಕ್ಷೆ ನಡೆಸಿದಾಗ ಸೋಂಕು ತಗುಲಿರುವುದು ದೃಢಪಟ್ಟಿದೆ. ಬಳಿಕ ಆಸ್ಪತ್ರೆಯವರು ಲಕ್ಷಾಂತರ ರೂ. ಹಣ ಕಟ್ಟಿಸಿಕೊಂಡು ಡಿಸ್ಚಾರ್ಚ್ ಮಾಡಿ, ರಿಮ್ಸ್ಗೆ ದಾಖಲಿಸುವಂತೆ ಸೂಚಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ವೈದ್ಯ ಡಾ.ಬಸವನಗೌಡ ಪಾಟೀಲ್ ಅವರು, ನಾವು ನಮ್ಮ ಕರ್ತವ್ಯದಂತೆ ಚಿಕಿತ್ಸೆ ನೀಡಿದ್ದೇವೆ. ಮಹಿಳೆಗೆ ಧಮ್ಮು ಕಾಣಿಸಿಕೊಂಡಿತ್ತು. ಆಗ ಕೊರೊನಾ ಟೆಸ್ಟ್ ಮಾಡಿದಾಗ, ಸೋಂಕು ಇರುವುದು ದೃಢಪಟ್ಟಿತ್ತು. ಬಳಿಕ ಮಹಿಳೆಯನ್ನ ರಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಹೇಳಲಾಗಿತ್ತು. ಆದ್ರೆ ಇದೀಗ ಮಹಿಳೆ ಮೃತಪಟ್ಟಿದ್ದು, ಅದಕ್ಕೆ ನಾವು ಕಾರಣವೆಂದು ಅನಾವ್ಯಶಕವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದಿದ್ದಾರೆ.