ರಾಯಚೂರು: ಇತ್ತೀಚಿಗೆ ಪೊಲೀಸ್ ಇಲಾಖೆ ಹಾಗೂ ನಗರಸಭೆ, ಬೀದಿ ವ್ಯಾಪಾರಸ್ಥರನ್ನು ತೆರವುಗೊಳಿಸಿದ್ದು, ಇದನ್ನು ಖಂಡಿಸಿ, ಪುನಃ ವ್ಯಾಪಾರ ಮಾಡಲು ಅನುಕೂಲ ಮಾಡಿಕೊಡಬೇಕು ಎಂದು ಹೈದರಾಬಾದ್ ಕರ್ನಾಟಕ ಬೀದಿ ವ್ಯಾಪಾರಿಗಳು ಪ್ರತಿಭಟನೆ ನಡೆಸಿದರು.
ಬೀದಿ ವ್ಯಾಪಾರಿಗಳ ತೆರವು ಖಂಡಿಸಿ ರಾಯಚೂರಿನಲ್ಲಿ ಪ್ರತಿಭಟನೆ - ರಾಯಚೂರಿನಲ್ಲಿ ಪ್ರತಿಭಟನೆ
ರಾಯಚೂರಿನಲ್ಲಿ ಪೊಲೀಸ್ ಇಲಾಖೆ ಬೀದಿ ವ್ಯಾಪಾರಿಗಳನ್ನು ತೆರವು ಗೊಳಿಸಿರುವುದನ್ನು ಖಂಡಿಸಿ, ಹೈದರಾಬಾದ್ ಕರ್ನಾಟಕ ವ್ಯಾಪಾರಿಗಳು ಪ್ರತಿಭಟನೆ ನಡೆಸಿದರು.
![ಬೀದಿ ವ್ಯಾಪಾರಿಗಳ ತೆರವು ಖಂಡಿಸಿ ರಾಯಚೂರಿನಲ್ಲಿ ಪ್ರತಿಭಟನೆ](https://etvbharatimages.akamaized.net/etvbharat/prod-images/768-512-4216182-thumbnail-3x2-rcr.jpg)
ರಾಯಚೂರಿನಲ್ಲಿ ಪ್ರತಿಭಟನೆ
ನಗರದ ಸ್ಟೆಷನ್ ವೃತ್ತದಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ನಗರಸಭೆ, ಟಿಪ್ಪುಸುಲ್ತಾನ ಉದ್ಯಾನದ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ವ್ಯಾಪಾರಿಗಳು ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಸ್ಥಾನಿಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಹೈ.ಕ ಬೀದಿ ವ್ಯಾಪಾರಿಗಳಿಂದ ಪೊಲೀಸರ ವಿರುದ್ಧ ಪ್ರತಿಭಟನೆ
ಕೇಂದ್ರ ಸರ್ಕಾರ ಸ್ಟ್ರೀಟ್ ವೆಂಡರ್ಸ್ ಆಕ್ಟ್ 2014 ಮಸೂದೆ ಜಾರಿ ಮಾಡಿದ್ದು, ನಗರಸಭೆಯವರು ಯಾವುದೇ ಬೀದಿ ವ್ಯಾಪಾರಸ್ಥರ ಏಳಿಗೆಗೆ ಶ್ರಮಿಸುತ್ತಿಲ್ಲ. ನಾಲ್ಕು ತಿಂಗಳಿಗೊಮ್ಮೆ ಬೀದಿ ವ್ಯಾಪಾರಸ್ಥರನ್ನು ತೆರವುಗೊಳಿಸಿ ಬಡಜೀವಗಳ ಮೇಲೆ ದರ್ಪ ತೋರಿಸುತ್ತಿದ್ದಾರೆ ಎಂದು ದೂರಿದರು.