ರಾಯಚೂರು: ಕೊರೊನಾ ಪಾಸಿಟಿವ್ ಪ್ರಕರಣಗಳ ಪತ್ತೆ ಹಿನ್ನೆಲೆಯಲ್ಲಿ ರಾಯಚೂರು ನಗರವನ್ನು ಇಂದು ಒಂದು ದಿನದ ಮಟ್ಟಿಗೆ ಸಂಪೂರ್ಣ ಲಾಕ್‌ಡೌನ್ ಮಾಡಲಾಗಿದೆ.
ರಾಯಚೂರು ತಾಲೂಕಿನ ಸಾಂಸ್ಥಿಕ ಕ್ವಾರಂಟೈನ್ನಲ್ಲಿದ್ದ ನಾಲ್ವರಿಗೆ ಕೊರೊನಾ ಪಾಟಿಸಿವ್ ಬಂದ ಹಿನ್ನೆಲೆ ಪ್ರಾಥಮಿಕ, ದ್ವೀತಿಯ ಸಂಪರ್ಕ ಪತ್ತೆ ಹಚ್ಚುವುದಕ್ಕೆ ಒಂದು ದಿನದ ಮಟ್ಟಿಗೆ ಲಾಕ್‌ಡೌನ್ ಮಾಡಲಾಗಿದೆ. ಹೀಗಾಗಿ ಬೆಳಿಗ್ಗೆಯಿಂದ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಲಾಗಿದ್ದು, ಬೆಳಿಗ್ಗೆ ತರಕಾರಿ, ಹಾಲಿನ ವ್ಯಾಪಾರ ನಡೆದಿದೆ.