ರಾಯಚೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಜಿಲ್ಲಾಡಳಿತ ನಾಳೆಯಿಂದ ಸಂಪೂರ್ಣ ಲಾಕ್‌ಡೌನ್ ಘೋಷಣೆ ಮಾಡಿದ್ದು, ಮದ್ಯ ಪ್ರಿಯರು ವೈನ್ಸ್ ಬಳಿ ಮುಗಿಬಿದ್ದಿದ್ದಾರೆ.
ರಾಯಚೂರು ಸಂಪೂರ್ಣ ಲಾಕ್‌ಡೌನ್: ಮದ್ಯ ಖರೀದಿಗೆ ಮುಗಿಬಿದ್ದ ಜನ - People who have been buying liquor
ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸಾವಿರ ಗಡಿ ದಾಟಿದೆ. ಇದರಿಂದ ಕೋವಿಡ್ ಹತೋಟಿಗೆ ತರಲು ಜಿಲ್ಲಾಡಳಿತ ನಾಳೆಯಿಂದ ಜಿಲ್ಲೆಯಾದ್ಯಂತ ಮೂರು ದಿನಗಳ ಕಾಲ ಸಂಪೂರ್ಣ ಲಾಕ್ಡೌನ್ಗೆ ಆದೇಶಿಸಿದೆ.
ಮದ್ಯ ಖರೀದಿ
ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸಾವಿರ ಗಡಿ ದಾಟಿದೆ. ಇದರಿಂದ ಕೋವಿಡ್ ಹತೋಟಿಗೆ ತರಲು ಜಿಲ್ಲಾಡಳಿತ ನಾಳೆಯಿಂದ ಜಿಲ್ಲೆಯಾದ್ಯಂತ ಮೂರು ದಿನಗಳ ಕಾಲ ಸಂಪೂರ್ಣ ಲಾಕ್ಡೌನ್ಗೆ ಆದೇಶಿಸಿದೆ. ಹೀಗಾಗಿ ಮದ್ಯ ಪ್ರಿಯರು ಮೂರು ದಿನಗಳು ಎಣ್ಣೆ ದೊರೆಯದು ಎನ್ನುವ ಕಾರಣಕ್ಕೆ ಮದ್ಯದಂಗಡಿ ಬಳಿ ಮುಗಿಬಿದ್ದಿರುವ ದೃಶ್ಯ ಕಂಡು ಬಂತು.
ಮದ್ಯ ಖರೀದಿಗೆ ನಾ ಮುಂದು, ತಾ ಮುಂದು ಎಂದು ಮುಗಿಬಿದ್ದರು. ವೈನ್ ಶಾಪ್ಗಳಿಗೆ ಭರ್ಜರಿ ವ್ಯಾಪಾರ ವಹಿವಾಟು ನಡೆಯುತ್ತಿತ್ತು. ಈ ನಡುವೆ ಪರಸ್ಪರ ಅಂತರ ಕಾಯ್ದುಕೊಳ್ಳುವುದನ್ನ ಮರೆತಿದ್ದರು.