ಕರ್ನಾಟಕ

karnataka

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ರಾಯಚೂರಿಗೆ 31ನೇ ಸ್ಥಾನ!

By

Published : Jul 14, 2020, 7:20 PM IST

ಈ ಪೈಕಿ 9,392 ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ರೆ, ಹೊಸದಾಗಿ ಪರೀಕ್ಷೆ ಬರೆದ 14,617 ವಿದ್ಯಾರ್ಥಿಗಳಲ್ಲಿ 8,218 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಹೊಸದಾಗಿ ಪರೀಕ್ಷೆ ಬರೆದ ಶೇ.38ರಷ್ಟು ಬಾಲಕರು ತೇರ್ಗಡೆಯಾಗಿದ್ರೆ, ಶೇ.47 ಬಾಲಕಿಯರು ಉತ್ತೀರ್ಣವಾಗುವ ಮೂಲಕ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ..

PUC results of raichur
PUC results of raichur

ರಾಯಚೂರು: ರಾಜ್ಯಾದ್ಯಂತ ಇಂದು ಬಿಡುಗಡೆಯಾದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆ ರಾಜ್ಯದಲ್ಲಿ 31ನೇ ಸ್ಥಾನ ಪಡೆದುಕೊಂಡಿದೆ.

ಕಳೆದ ವರ್ಷ 27ನೇ ಸ್ಥಾನದಲ್ಲಿದ್ದ ಜಿಲ್ಲೆ ಈ ಬಾರಿ 31ನೇ ಸ್ಥಾನಕ್ಕೆ ಇಳಿಕೆಯಾಗಿದೆ. ಆದರೆ, ಶೇಕಡವಾರು ಫಲಿತಾಂಶದ ಪ್ರಮಾಣದಲ್ಲಿ ಅಷ್ಟೊಂದು ಕಡಿಮೆಯಾಗಿಲ್ಲ. ಕಳೆದ ವರ್ಷ ಹೊಸದಾಗಿ ಪರೀಕ್ಷೆ ಬರೆದ ಶೇ.56.73ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ರೆ, ಪ್ರಸಕ್ತ ಸಾಲಿನಲ್ಲಿ ಶೇ.56.22ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಹೊಸದಾಗಿ, ಮರು ಹಾಗೂ ಖಾಸಗಿಯಾಗಿ, ಕಳೆದ ವರ್ಷ ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ ಶೇ.47.94ರಷ್ಟು ಫಲಿತಾಂಶ ಪಡೆದಿದ್ದ ಜಿಲ್ಲೆ ಪ್ರಸಕ್ತ ವರ್ಷದಲ್ಲಿ ಶೇ.46.22ರಷ್ಟು ಫಲಿತಾಂಶ ಬಂದಿದೆ. ಜಿಲ್ಲೆಯಲ್ಲಿ ಒಟ್ಟು 20,322 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಈ ಪೈಕಿ 9,392 ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ರೆ, ಹೊಸದಾಗಿ ಪರೀಕ್ಷೆ ಬರೆದ 14,617 ವಿದ್ಯಾರ್ಥಿಗಳಲ್ಲಿ 8,218 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಹೊಸದಾಗಿ ಪರೀಕ್ಷೆ ಬರೆದ ಶೇ.38ರಷ್ಟು ಬಾಲಕರು ತೇರ್ಗಡೆಯಾಗಿದ್ರೆ, ಶೇ.47 ಬಾಲಕಿಯರು ಉತ್ತೀರ್ಣವಾಗುವ ಮೂಲಕ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ.

ಕಲಾ ವಿಭಾಗದಲ್ಲಿ 11,279 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 4,045 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 5,562 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 3,053 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 3,481 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2,294 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ನಗರ ಪ್ರದೇಶದಲ್ಲಿನ 16,087 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅವರಲ್ಲಿ 7,468 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ರೆ, ಗ್ರಾಮೀಣ ಪ್ರದೇಶದ 4,235 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅವರಲ್ಲಿ 1,924 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ABOUT THE AUTHOR

...view details