ರಾಯಚೂರು:ಜಿಲ್ಲೆಯಲ್ಲಿ ಮೊದಲನೇ ಹಂತದಲ್ಲಿ ನಡೆಯುವ ಗ್ರಾಮ ಪಂಚಾಯಿತಿ ಚುನಾವಣೆಯ ಮತದಾನಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
ಮೊದಲ ಹಂತದಲ್ಲಿ ಜಿಲ್ಲೆಯ ಮಾನವಿ, ಸಿರವಾರ ಹಾಗೂ ದೇವದುರ್ಗ ತಾಲೂಕಿನ 93 ಗ್ರಾಮ ಪಂಚಾಯಿತಿಗಳಲ್ಲಿ 82 ಸೂಕ್ಷ್ಮ ಹಾಗೂ 767 ಮತಗಟ್ಟೆಗಳು ಸೇರಿದಂತೆ ಒಟ್ಟು 849 ಮತಗಟ್ಟೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಪ್ರದೇಶಗಳಲ್ಲಿ ಭದ್ರತೆ ಒದಗಿಸಲು ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಜಿಲ್ಲೆಯ ಪೊಲೀಸ್ ಅಧಿಕಾರಿಗಳು, 981 ಪೊಲೀಸ್ ಸಿಬ್ಬಂದಿ ಮತ್ತು 161 ಗೃಹ ರಕ್ಷಕ ದಳದ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನೇಮಿಸಲಾಗಿದೆ. ಮತದಾನದ ವೇಳೆ ಅಹಿತಕರ ಘಟನೆ ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡಲು ಒಟ್ಟು 46 ಮೊಬೈಲ್ ಸೆಕ್ಟರ್, 17 ಸೂಪರ್ ವೈಸರ್ ಮೊಬೈಲ್ ಸೆಕ್ಟರ್ ಗಳಳಲ್ಲಿ ಅಧಿಕಾರಿಗಳನ್ನು ನೇಮಿಸಲಾಗಿದೆ. 4 ಕೆಆರ್ಆರ್ಪಿ, 10 ಡಿಎಆರ್ ತುಕಡಿಯ ತುರ್ತು ಕಾರ್ಯಪಡೆ ನಿಯೋಜನೆ ಮಾಡಲಾಗಿದೆ.