ರಾಯಚೂರು: ನಗರದ ಹೊರವಲಯದ ಬೈಪಾಸ್ ಬಳಿ ಅಕ್ರವಾಗಿ ಮರಳು ಸಾಗಿಸುತ್ತಿದ್ದ ವೇಳೆ ದಾಳಿ ನಡೆಸಿ ಎರಡು ಟಿಪ್ಪರ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಕ್ರಮ ಮರಳು ಸಾಗಣೆ: ಎರಡು ಟಿಪ್ಪರ್ ವಶಪಡಿಸಿಕೊಂಡ ಪೊಲೀಸರು - ರಾಯಚೂರು ಸಹಾಯಕ ಆಯುಕ್ತ ಸಂತೋಷ ಕಾಮಗೌಡ ನ್ಯೂಸ್
ಅಕ್ರಮವಾಗಿ ಮರಳು ಸಾಗಿಸುಸುತ್ತಿದ್ದ ವೇಳೆ ಸಹಾಯಕ ಆಯುಕ್ತ ಸಂತೋಷ ಕಾಮಗೌಡ ನೇತೃತ್ವದಲ್ಲಿ ದಾಳಿ ನಡೆಸಿ ಎರಡು ಟಿಪ್ಪರ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Tipper
ಬೈಪಾಸ್ ರಸ್ತೆ ಹತ್ತಿರ ಇಂದು ಬೆಳಗ್ಗೆ ಖಚಿತ ಮಾಹಿತಿ ಮೇರೆಗೆ ಸಹಾಯಕ ಆಯುಕ್ತ ಸಂತೋಷ ಕಾಮಗೌಡ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಈ ವೇಳೆ ಮರಳು ಸಮೇತ ಎರಡು ಟಿಪ್ಪರ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಟಿಪ್ಪರ್ ನಲ್ಲಿ ಅಕ್ರಮವಾಗಿ ಕೃಷ್ಣಾ ಮತ್ತು ತುಂಗಭದ್ರಾ ನದಿಯಿಂದ ಮರಳನ್ನು ತುಂಬಿಕೊಂಡು ಬರುತ್ತಿದ್ದರು ಎಂದು ತಿಳಿದುಬಂದಿದೆ.