ರಾಯಚೂರು: ಜೂನ್ 18ರಂದು ರಾಜ್ಯಾದ್ಯಂತ ದ್ವಿತೀಯ ಪಿಯು ಇಂಗ್ಲಿಷ್ ಭಾಷಾ ಪರೀಕ್ಷೆ ನಡೆಯಲಿದೆ. ಇದಕ್ಕಾಗಿ ಎಲ್ಲ ಕಡೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಕೆಲ ಮಾರ್ಗಸೂಚಿಗಳನ್ನು ನೀಡಿದೆ. ಇದನ್ನು ಈಗಾಗಲೇ ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ಅನುಸರಣೆ ಮಾಡಲಾಗಿದೆ.
ಪಿಯು ಆಂಗ್ಲ ಭಾಷೆ ಪರೀಕ್ಷೆಗೆ ರಾಯಚೂರು ರೆಡಿ.. - PU English language test at raichur
ವಿದ್ಯಾರ್ಥಿಗಳೇ ಮಾಸ್ಕ್ ತರಬೇಕು. ಒಂದು ವೇಳೆ ಯಾರಾದ್ರೂ ಬಿಟ್ಟು ಬಂದ್ರೆ ಮಾತ್ರ ಮಾಸ್ಕ್ ನೀಡಲಾಗುವುದು. ಸ್ಯಾನಿಟೈಸರ್ ವ್ಯವಸ್ಥೆ ಪರೀಕ್ಷಾ ಕೇಂದ್ರದಲ್ಲಿ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಗೆ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
ದ್ವಿತೀಯ ಪಿಯು ಆಂಗ್ಲ ಭಾಷಾ ಪರೀಕ್ಷೆಗೆ ಸಿದ್ಧವಾದ ರಾಯಚೂರು
ಈ ಬಗ್ಗೆ ಮಾತನಾಡಿದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕಲ್ಲಯ್ಯ ಸಿ ಟಿ, ಜಿಲ್ಲೆಯಲ್ಲಿ ಒಟ್ಟು 19,397 ವಿದ್ಯಾರ್ಥಿಗಳು ನಾಳೆ ಪರೀಕ್ಷೆ ಬರೆಯಲಿದ್ದಾರೆ. ಹೊರ ರಾಜ್ಯದಿಂದ 1303 ವಿದ್ಯಾರ್ಥಿಗಳು, ಹೊರ ರಾಜ್ಯದಿಂದ 13 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ತೆಲಂಗಾಣ ಮತ್ತು ಆಂಧ್ರದಿಂದ 13 ಜನ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆ ಮುಗಿಸಿಕೊಂಡು ವಾಪಸ್ ತೆರಳುವ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದರು.
ಪರೀಕ್ಷೆಗೆ ಬರುವ ವಿದ್ಯಾರ್ಥಿಗಳು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ.ವಿದ್ಯಾರ್ಥಿಗಳೇ ಮಾಸ್ಕ್ ತರಬೇಕು. ಒಂದು ವೇಳೆ ಯಾರಾದ್ರೂ ಬಿಟ್ಟು ಬಂದ್ರೆ ಮಾತ್ರ ಮಾಸ್ಕ್ ನೀಡಲಾಗುವುದು. ಸ್ಯಾನಿಟೈಸರ್ ವ್ಯವಸ್ಥೆ ಪರೀಕ್ಷಾ ಕೇಂದ್ರದಲ್ಲಿ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಗೆ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜೊತೆಗೆ ಈಗಾಗಲೇ ಎಲ್ಲಾ ಪರೀಕ್ಷಾ ಕೊಠಡಿಗಳನ್ನ ಸ್ಯಾನಿಟೈಸ್ ಮಾಡಲಾಗಿದೆ ಎಂದು ವಿವರಿಸಿದರು.