ರಾಯಚೂರು: ನಗರಸಭೆ ಕಲುಷಿತ ನೀರು ಕುಡಿದು ಅನಾರೋಗ್ಯದಿಂದ ಮೂವರು ಸಾವನ್ನಪ್ಪಿರುವ ಪ್ರಕರಣದ ಹಿನ್ನೆಲೆ ಸಹಾಯಕ ಕಾರ್ಯಪಾಲಕ ಅಭಿಯಂತರ(ಎಇಇ) ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ನಗರಸಭೆ ಎಇಇ ವೆಂಕಟೇಶ ಅಮಾನತುಗೊಂಡಿರುವ ಅಧಿಕಾರಿ.
ರಾಜ್ಯಪಾಲರ ಆಜ್ಞಾನುಸಾರ, ನಗರಾಭಿವೃದ್ಧಿ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಎಲ್. ಪ್ರಸಾದ್ ಅಮಾನತು ಆದೇಶ ಹೊರಡಿಸಿದ್ದಾರೆ. ಈಗಾಗಲೇ ಸಹಾಯಕ ಅಭಿಯಂತರ ಕೃಷ್ಣ ಎಂಬುವರನ್ನು ರಾಯಚೂರು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ್ ವಜಾಗೊಳಿಸಿ ಆದೇಶ ಹೊರಡಿಸಿದ್ದರು. ಈಗ ಜಿಲ್ಲಾಧಿಕಾರಿ ಶಿಫಾರಸು ಮೇರೆಗೆ ಎಇಇ ವೆಂಕಟೇಶ್ ಅವರನ್ನು ಅಮಾನತು ಮಾಡಲಾಗಿದೆ.