ಕರ್ನಾಟಕ

karnataka

ETV Bharat / state

ರಾಯಚೂರು ನಗರಸಭೆ ಅಧ್ಯಕ್ಷ ಚುನಾವಣೆ : ಬಿಜೆಪಿ-ಕಾಂಗ್ರೆಸ್ ನಡುವೆ ಭಾರಿ ಪೈಪೋಟಿ

ಮಧ್ಯಾಹ್ನ 1 ಗಂಟೆಗೆ ನಗರಸಭೆ ಕಚೇರಿ ಸಭಾಂಗಣದಲ್ಲಿ ಚುನಾವಣೆ ನಡೆಯಲಿದೆ. ಕೈ ಎತ್ತುವ ಮೂಲಕ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಜರುಗಲಿದೆ. ಚುನಾವಣೆ ಹಿನ್ನೆಲೆ ‌ನಗರಸಭೆ ಕಚೇರಿ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿದೆ..

By

Published : Mar 30, 2022, 12:45 PM IST

Raichur municipal council election
ರಾಯಚೂರು ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ

ರಾಯಚೂರು :ಜಿಲ್ಲೆಯಲ್ಲಿ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದೆ. ಬಿಜೆಪಿ, ಕಾಂಗ್ರೆಸ್ ನಡುವೆ ಭಾರಿ ಪೈಪೋಟಿ ನಡೆದಿದೆ. ಒಟ್ಟು 35 ಸದಸ್ಯ ಬಲ ಹೊಂದಿರುವ ನಗರಸಭೆಯಲ್ಲಿ ಯಾವುದೇ ಸ್ಪಷ್ಟ ಬಹುಮತವಿಲ್ಲ. ಕಾಂಗ್ರೆಸ್-11, ಬಿಜೆಪಿ-12, ಜೆಡಿಎಸ್-3 ಹಾಗೂ ‌ಪಕ್ಷೇತರ 9 ಮಂದಿ ಸದಸ್ಯರು ಆಯ್ಕೆಯಾಗಿದ್ದಾರೆ.

ರಾಯಚೂರು ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ..

ಇದರ ಜತೆಗೆ ನಗರ‌ ಶಾಸಕ ಡಾ.ಶಿವರಾಜ್ ಪಾಟೀಲ್, ಎಂಎಲ್​ಸಿ ಶರಣಗೌಡ ಪಾಟೀಲ್ ಬಯ್ಯಾಪುರ, ಸಂಸದ ರಾಜಾ ಅಮರೇಶ್ವರ ನಾಯಕ ಮತಗಳನ್ನು ಹೊಂದಿದ್ದಾರೆ. ಕಾಂಗ್ರೆಸ್​​ನಿಂದ ಸಜೀದ್ ಸಮೀರ್ ಹಾಗೂ ಬಿಜೆಪಿಯಿಂದ ಲಲಿತಾ ಕಡಗೋಲು ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿದ್ದು, ಇಬ್ಬರು ನಾಮಪತ್ರವನ್ನು ಸಲ್ಲಿಸಿದ್ದಾರೆ.

ಮಧ್ಯಾಹ್ನ 1 ಗಂಟೆಗೆ ನಗರಸಭೆ ಕಚೇರಿ ಸಭಾಂಗಣದಲ್ಲಿ ಚುನಾವಣೆ ನಡೆಯಲಿದೆ. ಕೈ ಎತ್ತುವ ಮೂಲಕ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಜರುಗಲಿದೆ. ಚುನಾವಣೆ ಹಿನ್ನೆಲೆ ‌ನಗರಸಭೆ ಕಚೇರಿ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿದೆ.

ಇದನ್ನೂ ಓದಿ:ನಲ್ಲೂರು ಮಠದ ಮನೆ - ಬಡಾಮಕಾನ್ ಆಸ್ತಿ ವಿವಾದ: ವಿರೋಧದ ನಡುವೆ ಸರ್ವೇ ಕಾರ್ಯ ಪ್ರಾರಂಭ

ABOUT THE AUTHOR

...view details