ಕರ್ನಾಟಕ

karnataka

ETV Bharat / state

ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಡಿಸಿ ಸೂಚನೆ - ಜಿಲ್ಲಾಧಿಕಾರಿ ನೇತೃತ್ವದಲ್ಲಿ ರಾಯಚೂರು ನಗರಸಭೆ ಸಭೆ

ರಾಯಚೂರು ನಗರದ ಸೌಂದರ್ಯ ಹಾಗೂ ಸಮಗ್ರ ಅಭಿವೃದ್ಧಿಯ ಕಡೆ ಗಮನಹರಿಸಿ ಸ್ವಚ್ಛತೆ, ನೈರ್ಮಲ್ಯ ಶುದ್ಧ ನೀರು ಸರಬರಾಜು ಮಾಡಬೇಕು ಹಾಗೂ ಹದಗೆಟ್ಟ ರಸ್ತೆ ದುರಸ್ತಿಗೊಳಿಸಿ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕು ಎಂದು ನಗರಸಭೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಸೂಚಿಸಿದರು.

ರಾಯಚೂರು ನಗರಸಭೆಯ ಪ್ರಗತಿ ಪರಿಶೀಲನಾ ಸಭೆ

By

Published : Nov 5, 2019, 9:58 PM IST

ರಾಯಚೂರು:ನಗರಸಭೆಯ ಸಭಾಂಗಣದಲ್ಲಿ ಇಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಸಭೆಯಲ್ಲಿ ನಗರಸಭೆ ವ್ಯಾಪ್ತಿಯಲ್ಲಿನ ಮಳಿಗೆಗಳೆಷ್ಟು, ಕಳೆದ ಹಲವಾರು ವರ್ಷಗಳಿಂದ ಬಾಡಿಗೆ ಯಾಕೆ ಬರುತ್ತಿಲ್ಲ ಎಂದು ಡಿಸಿ ಕಂದಾಯ ಅಧಿಕಾರಿಗೆ ಪ್ರಶ್ನಿಸಿದರು. ಈ ಬಗ್ಗೆ ಉತ್ತರಿಸಿದ ಅಧಿಕಾರಿ ಮುನಿಸ್ವಾಮಿ, ನಗರಸಭೆಯ ನಗರದಲ್ಲಿ ಒಟ್ಟು 206 ಮಳಿಗೆಗಳಿದ್ದು, ಈ ಪೈಕಿ 99 ಮಳಿಗೆಗಳಿಂದ ಬಾಡಿಗೆ ಪಾವತಿಯಾಗುತ್ತಿದೆ. 107 ಮಳಿಗೆಗಳಿಂದ ಬಾಡಿಗೆ ಬರುತ್ತಿಲ್ಲ. ಅಲ್ಲದೇ ಅನೇಕ ಮಳಿಗೆಗಳು ಖಾಲಿಯಿದ್ದು, ಕೆಲವರಿಂದ ನಿಗದಿತವಾಗಿ ಬಾಡಿಗೆ ಪಾವತಿಯಾಗುತ್ತಿಲ್ಲ ಎಂದು ತಿಳಿಸಿದರು.

ರಾಯಚೂರು ನಗರಸಭೆಯ ಪ್ರಗತಿ ಪರಿಶೀಲನಾ ಸಭೆ

ನಗರಸಭೆಯ ಆದಾಯಕ್ಕೆ ಮೂಲವಾಗಿರುವ ಈ ಮಳಿಗೆಗಳಿಂದ ಕಡ್ಡಾಯವಾಗಿ ಬಾಡಿಗೆ ಪಾವತಿ ಮಾಡಿಕೊಳ್ಳಬೇಕು. ಕೂಡಲೇ ಸಭೆ ಕರೆದು ಬಾಡಿಗೆ ದರ ಪರಿಷ್ಕರಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು. ಅಲ್ಲದೆ ಕುಡಿಯುವ ನೀರು ಶುದ್ಧೀಕರಣ ಘಟಕದಿಂದ ಕಲುಷಿತ ನೀರು ಸರಬರಾಜುವಾಗುವ ದೂರುಗಳಿದ್ದು, ಕೂಡಲೇ ಸಮಸ್ಯೆ ಬಗೆಹರಿಸಬೇಕು. ನಗರದ ಸೌಂದರ್ಯ ಹಾಗೂ ಸಮಗ್ರ ಅಭಿವೃದ್ಧಿಯ ಕಡೆ ಗಮನಹರಿಸಿ ಸ್ವಚ್ಛತೆ, ನೈರ್ಮಲ್ಯ ಶುದ್ಧ ನೀರು ಸರಬರಾಜು ಮಾಡಬೇಕು ಹಾಗೂ ಹದಗೆಟ್ಟ ರಸ್ತೆ ದುರಸ್ತಿಗೊಳಿಸಿ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ABOUT THE AUTHOR

...view details