ರಾಯಚೂರು:ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯ ರಾಮ ರಹಿಮ್ ಬಡಾವಣೆಯಲ್ಲಿರುವ ಅಂಬೇಡ್ಕರ್ ವಸತಿ ನಿಲಯವನ್ನು ಕ್ವಾರಂಟೈನ್ ಕೇಂದ್ರವನ್ನಾಗಿ ಮಾಡಿರುವುದನ್ನು ಬಡಾವಣೆ ನಾಗರಿಕರು ವಿರೋಧಿದ್ದಾರೆ.
ಹಟ್ಟಿ ಚಿನ್ನದ ಗಣಿಯಲ್ಲಿ ಕ್ವಾರಂಟೈನ್ ಕೇಂದ್ರ ಸ್ಥಾಪನೆಗೆ ಸ್ಥಳೀಯರ ವಿರೋಧ - Hatti chinnada gani Ramarhim
ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯ ರಾಮ ರಹಿಮ್ ಬಡಾವಣೆಯಲ್ಲಿರುವ ಅಂಬೇಡ್ಕರ್ ವಸತಿ ನಿಲಯವನ್ನು ಕ್ವಾರಂಟೈನ್ ಕೇಂದ್ರವನ್ನಾಗಿ ಮಾಡಿರುವುದನ್ನು ಬಡಾವಣೆ ನಾಗರಿಕರು ವಿರೋಧಿಸಿದ್ದು, ಜನರ ಮನವೊಲಿಸುವಲ್ಲಿ ಪಿಎಸ್ಐ ಮುದ್ದುರಂಗಸ್ವಾಮಿ ವಿಫಲರಾಗಿದ್ದಾರೆ.
![ಹಟ್ಟಿ ಚಿನ್ನದ ಗಣಿಯಲ್ಲಿ ಕ್ವಾರಂಟೈನ್ ಕೇಂದ್ರ ಸ್ಥಾಪನೆಗೆ ಸ್ಥಳೀಯರ ವಿರೋಧ Raichur: Opposition to quarantine center at Hatti chinnada gani](https://etvbharatimages.akamaized.net/etvbharat/prod-images/768-512-7174774-774-7174774-1589335080390.jpg)
ಮಂಗಳವಾರ ಪಿಎಸ್ಐ ಮುದ್ದುರಂಗಸ್ವಾಮಿ ನೇತೃತ್ವದಲ್ಲಿ ಮುಂಬೈ ಸೇರಿದಂತೆ ಹೊರ ರಾಜ್ಯ, ಕೆಂಪು ವಲಯ ಜಿಲ್ಲೆಗಳಿಂದ ಅಗಮಿಸಿದ್ದ ಜನರನ್ನು ಕ್ವಾರಂಟೈನ್ ಮಾಡಲು ಮುಂದಾದಾಗ ಎಚ್ಚೆತ್ತುಕೊಂಡ ಜನತೆ, ಸುತ್ತಮುತ್ತ ಮನೆಗಳಿವೆ. ಇಲ್ಲಿ ಕ್ವಾರಂಟೈನ್ ಕೇಂದ್ರ ಸ್ಥಾಪಿಸುವುದರಿಂದ ಮಕ್ಕಳು, ವಯೋವೃದ್ಧರ ಮೇಲೆ ಪರಿಣಾಮ ಬೀರಬಹುದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಪಿಎಸ್ಐ ಮುದ್ದುರಂಗಸ್ವಾಮಿ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ತೆಗೆದುಕೊಳ್ಳುವ ನಿರ್ಧಾರವನ್ನು ನಾವು ಗೌರವಿಸಬೇಕು. ಸಾರ್ವಜನಿಕರ ಹಿತದೃಷ್ಟಿಯಿಂದ ತೆಗೆದುಕೊಂಡ ನಿರ್ಧಾರ ಇದಾಗಿದೆ. ಕ್ವಾರಂಟೈನ್ನಲ್ಲಿ ಇರಲಿರುವವರು ಕೂಡ ನಿಮ್ಮವರಾಗಿದ್ದಾರೆ ಎಂದು ತಿಳಿಸಿ ಹೇಳಲು ಪ್ರಯತ್ನಿಸಿದರೂ ಕೊನೆಗೆ ಸಫಲರಾಗದೆ ವಾಪಸಾಗಿದ್ದಾರೆ.