ರಾಯಚೂರು: ಭಾನುವಾರದ ಲಾಕ್‌ಡೌನ್ ವೇಳೆ ಅನಗತ್ಯವಾಗಿ ಸಂಚರಿಸಿದ ಬೈಕ್ ಸವಾರರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ಅನಗತ್ಯ ಸಂಚಾರ: ಬೈಕ್ ಸವಾರರಿಗೆ ಬಿಸಿ ಮುಟ್ಟಿಸಿದ ರಾಯಚೂರು ಪೊಲೀಸರು - ಬೈಕ್ ಸವಾರರಿಗೆ ದಂಡ ವಿಧಿಸಿದ ರಾಯಚೂರು ಪೊಲೀಸರು
ರಾಯಚೂರಿನಲ್ಲಿ ಅನಾವಶ್ಯಕವಾಗಿ ತಿರುಗಾಡಿದ 484 ಬೈಕ್ ಸವಾರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ ಬೈಕ್ಗಳನ್ನು ಜಪ್ತಿ ಮಾಡಿದ್ದಾರೆ. ಅಲ್ಲದೇ ಬೈಕ್ ಸವಾರರಿಂದ 78,700 ರೂ. ದಂಡ ವಸೂಲಿ ಮಾಡಿದ್ದಾರೆ.
ಭಾನುವಾರದ ಲಾಕ್‌ಡೌನ್ ವೇಳೆ ಅಗತ್ಯ ವಸ್ತುಗಳು, ತುರ್ತು ಸೇವೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಆದ್ರೆ ಜಿಲ್ಲೆಯಲ್ಲಿ ಅನಾವಶ್ಯಕವಾಗಿ ವಾಹನ ಸವಾರರು ಓಡಾಡಿದ್ದಾರೆ. ಇದರಿಂದ ಪೊಲೀಸರು ಜಿಲ್ಲೆಯ ಒಟ್ಟು 484 ಬೈಕ್ ಸವಾರ ವಿರುದ್ಧ ಪ್ರಕರಣ ದಾಖಲಿಸಿ ಬೈಕ್ಗಳನ್ನು ಜಪ್ತಿ ಮಾಡಿದ್ದಾರೆ. ಅಲ್ಲದೇ ಬೈಕ್ ಸವಾರರಿಂದ 78,700 ರೂ. ದಂಡವನ್ನು ವಸೂಲಿ ಮಾಡಿದ್ದಾರೆ.
ಕೊರೊನಾ ಸೋಂಕು ನಿಯಂತ್ರಿಸಲು ಸರ್ಕಾರ ಭಾನುವಾರ ಒಂದು ದಿನ ಲಾಕ್‌ಡೌನ್ ಜಾರಿಗೊಳಿಸಿತ್ತು. ಈ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗಿತ್ತು. ಇದರ ನಡುವೆ ಅನಾವಶ್ಯಕವಾಗಿ ಓಡಾಡಿದವರಿಗೆ ಪೊಲೀಸರು ದಂಡ ವಿಧಿಸಿ, ಬಿಸಿ ಮುಟ್ಟಿದ್ದಾರೆ.