ರಾಯಚೂರು:ಕೊರೊನಾ ಲಾಕ್‌ಡೌನ್‌ನಿಂದ ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಕುಸಿತಗೊಂಡಿತ್ತು. ಹೀಗಾಗಿ ಕಲ್ಲಿದ್ದಲು ಆಧಾರಿತ ರಾಯಚೂರು ಬೃಹತ್ ಶಾಖೋತ್ಪನ್ನ ಕೇಂದ್ರ(ಆರ್‌ಟಿಪಿಎಸ್) ಎಲ್ಲಾ 8 ಘಟಕಗಳ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಲಾಗಿತ್ತು. ಇದೀಗ ಆನ‌್‌ಲಾಕ್ ಬಳಿಕ ಬೇಡಿಕೆಯಲ್ಲಿ ಚೇತರಿಕೆ ಮತ್ತು ಜಲ ಮೂಲಗಳಿಂದ ಉತ್ಪಾದನೆಯಲ್ಲಿ ಇಳಿಮುಖವಾದ್ದರಿಂದ 3 ತಿಂಗಳ ಬಳಿಕ ಆರ್‌ಟಿಪಿಎಸ್ ವಿದ್ಯುತ್ ಉತ್ಪಾದನೆಯನ್ನು ಪುನಾರಂಭಿಸಿದೆ.
ಬರೋಬ್ಬರಿ ಮೂರು ತಿಂಗಳ ಬಳಿಕ ಆರ್ಟಿಪಿಎಸ್ನಲ್ಲಿ ವಿದ್ಯುತ್ ಉತ್ಪಾದನೆ ಆರಂಭ - ಆರ್‌ಟಿಪಿಎಸ್‌ನ 1ನೇ ಘಟಕದಿಂದ ವಿದ್ಯುತ್ ಉತ್ಪಾದನೆ ಆರಂಭ
ವಿದ್ಯುತ್ ಬೇಡಿಕೆಯಲ್ಲಿ ಚೇತರಿಕೆ ಮತ್ತು ಜಲಮೂಲಗಳಿಂದ ಉತ್ಪಾದನೆಯಲ್ಲಿ ಇಳಿಮುಖವಾದ್ದರಿಂದ 3 ತಿಂಗಳ ಬಳಿಕ ಆರ್‌ಟಿಪಿಎಸ್ ಪುನಃ ವಿದ್ಯುತ್ ಉತ್ಪಾದನೆ ಪ್ರಾರಂಭಿಸಿದೆ.
ಆರ್‌ಟಿಪಿಎಸ್‌ನ 1ನೇ ಘಟಕದಿಂದ ವಿದ್ಯುತ್ ಉತ್ಪಾದನೆ ಆರಂಭ
ಒಟ್ಟು 8 ಘಟಕಗಳಿಂದ 1,720 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಸಾಮರ್ಥ್ಯ ಹೊಂದಿರುವ ಕೇಂದ್ರದಲ್ಲಿ ಶನಿವಾರ 1ನೇ ಘಟಕದಿಂದ 158 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಿದ್ದು, ರಾಜ್ಯ ವಿದ್ಯುತ್ ಜಾಲಕ್ಕೆ ರವಾನಿಸಲಾಗುತ್ತಿದೆ. ಅಲ್ಲದೇ ಬಿಟಿಪಿಎಸ್ ಸಹ ವಿದ್ಯುತ್ ಉತ್ಪಾದನೆ ಆರಂಭಿಸಿದೆ. ಆರ್‌ಟಿಪಿಎಸ್‌ನ ಇತಿಹಾಸದಲ್ಲೇ ಮೊದಲ ಬಾರಿಗೆ ಎಲ್ಲಾ 8 ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಲಾಗಿತ್ತು.
ಇದೀಗ ಪವನ, ಸೌರ ಮೂಲಗಳಿಂದ ವಿದ್ಯುತ್ ಉತ್ಪಾದನೆ ಇಳಿಮುಖವಾಗಿದ್ದರಿಂದ ಶಾಖೋತ್ಪನ್ನ ಕೇಂದ್ರಗಳಿಂದ ಬೇಡಿಕೆ ಹೆಚ್ಚಿದೆ. ಬೇಡಿಕೆ ಆಧಾರದ ಮೇಲೆ ಹಂತ-ಹಂತವಾಗಿ ಉತ್ಪಾದನೆ ಹೆಚ್ಚಿಸುವ ಸಾಧ್ಯತೆಯಿದೆ.